• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆಸರುಗದ್ದೆಯ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳ ನೋಂದಣಿ ಶುರು

By ಬಿಎಂ ಲವಕುಮಾರ್‌
|

ಮಡಿಕೇರಿ, ಜು.25: ಇದುವರೆಗೆ ರಾಜಕೀಯ ದೊಂಬರಾಟ ನೋಡಿ ಸುಸ್ತಾದವರು, ನಗರದ ಗೌಜು ಗದ್ದಲಗಳಲ್ಲಿ ಕಳೆದು ಹೋದವರು, ಒಂದಿಷ್ಟು ಮನಸ್ಸಿಗೆ ರಿಲ್ಯಾಕ್ಸ್ ಮಾಡಿಕೊಳ್ಳಬೇಕೆಂದು ಬಯಸುವವರು, ಕೊಡಗಿನ ಮಳೆ, ಭತ್ತದ ಬಯಲು, ಕೃಷಿಯಲ್ಲೂ ತನ್ನದೇ ಸಾಂಪ್ರದಾಯಿಕತೆ, ಕೆಸರು ಗದ್ದೆಯನ್ನೇ ಕ್ರೀಡಾಂಗಣವಾಗಿ ಮಾಡಿ ಸಂಭ್ರಮ ಪಡುವ ಪರಿಯನ್ನು ನೋಡಬೇಕೆ?.

ಸುರಿಯುವ ಮಳೆಯಲ್ಲಿ ಕೆಸರುಗದ್ದೆಯಲ್ಲಿ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ತವಕವಿದ್ದರೆ ಕೂಡಲೇ ಹೆಸರು ನೊಂದಾಯಿಸಿಕೊಳ್ಳಿ. ಆ.11 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ. ಬೋಪಯ್ಯನವರ ಗದ್ದೆಯಲ್ಲಿ ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದೆ.

ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ

ಇದರಲ್ಲಿ ಭಾಗವಹಿಸುವ ಬಯಕೆಯಿದ್ದರೆ ಈಗಿನಿಂದಲೇ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ಬಾರಿ 27 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾ ಕೂಟದಲ್ಲಿ ಪುರುಷ ವಿಭಾಗಕ್ಕೆ ವಾಲಿಬಾಲ್, ಮಹಿಳೆಯರ ವಿಭಾಗಕ್ಕೆ ಥ್ರೋಬಾಲ್ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲಾಗುತ್ತಿದೆ.

ಕೊಡಗಿನ ಮಳೆಯಲ್ಲಿ ಆಟಿ-ನಾಟಿ ಕೂಡುಕೂಟದ ಸಂಭ್ರಮ

ಕಿರಿಯ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100 ಮೀ. ಓಟ ಪ್ರೌಢ ಶಾಲಾ ಬಾಲಕರಿಗೆ 200 ಮೀ. ಓಟ ಹಾಗೂ ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 300 ಮೀ ಓಟದ ಸ್ಪರ್ಧೆ ನಡೆಯಲಿದೆ.

ಸಾರ್ವಜನಿಕ ಪುರುಷರು ಮತ್ತು ಮಹಿಳೆಯರಿಗೆ ಮುಕ್ತ ಓಟ ಹಾಗೂ ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆಯನ್ನು ಏರ್ಪಡಿಸಿರುವುದಾಗಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ ಅವರು ಮಾಹಿತಿ ನೀಡಿದ್ದು ಅವರು ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಆಕರ್ಷಕ ಪಾರಿತೋಷಕ ಮತ್ತು ನಗದು ಬಹುಮಾನಗಳನ್ನು ನೀಡಲಾಗುವುದು. ಪ್ರೌಢಶಾಲಾ ವಿಭಾಗದ ಹಗ್ಗ ಜಗ್ಗಾಟದಲ್ಲಿ ಭಾಗವಹಿಸುವವರು ತಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ತರುವುದು ಅಗತ್ಯವಾಗಿದೆ. ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.11 ರಂದು ಬೆಳಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದ್ದು ಹೆಚ್ಚಿನ ಮಾಹಿತಿಗೆ 9449952008, 9740404520, 9483835674 ಸಂಪರ್ಕಿಸಬಹುದಾಗಿದೆ.

English summary
Kesaru gadde vota is very popular during monsoon in Kodagu. Paddy fields turn sports ground when there is not much work for the people. It has become popular sports too.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X