ಕೊಡಗು: ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ

ಮಡಿಕೇರಿ, ಆಗಸ್ಟ್ 07: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 2,298.82 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1,197.17 ಮಿ. ಮೀ. ಮಳೆಯಾಗಿತ್ತು. ಮಳೆ ಕಡಿಮೆಯಾದರೂ ಸಹ ಮುಂದಿನ ಕೆಲವು ದಿನಗಳ ಕಾಲ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತದೆ.

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದರು. "ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ" ಎಂದರು.

Alert In Landslide And Flood Areas Of Kaodagu

"ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸಬೇಕು. ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು" ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

"ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ, ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ" ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ಮೂಲ ಸೌಲಭ್ಯವನ್ನು ಒದಗಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ" ಎಂದು ಹೇಳಿದರು.

"ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ. ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ, ಪಂಚಾಯಿತಿ ಇಂದ ಹಣ ಬಿಡುಗಡೆ ಮಾಡಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ" ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, "ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ" ಎಂದರು.

ಮುಖ್ಯಮಂತ್ರಿಗಳ ಭೇಟಿ: ಕೊಡಗು ಜಿಲ್ಲೆಗೆ ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಾಧ್ಯಮಗಳ ಜೊತೆ ಮಾತನಾಡಿ, "ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ" ಎಂದು ಹೇಳಿದ್ದರು.

"ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇವೆ. 14 ಪರಿಹಾರ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. 10 ಕೇಂದ್ರಗಳಲ್ಲಿ 186 ಮಂದಿ ಇದ್ದಾರೆ. ತೋರಾನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ" ಎಂದು ತಿಳಿಸಿದ್ದರು.

"28 ಹೆಕ್ಟೇರ್‌ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್‌ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿ. ಮೀ. ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ 50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ" ಎಂದು ವಿವರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+