ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮೇ 28: ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಬಳಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆಯಾಗಿದೆ. ಯಡವನಾಡುವಿನ ಅರಣ್ಯದಲ್ಲಿ ಸ್ಥಳ ಪರಿಶೀಲನೆಗೆ ತೆರಳಿದಾಗ ಕ್ರಿ.ಶ 15-16 ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆಯಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.

Recommended Video

ಮನೆಯಲ್ಲೇ ಕ್ವಾರಂಟೈನ್ ಗೆ ಅವಕಾಶ ಕೊಡಿ ಎಂದು ಬೇಡಿಕೊಳ್ತಿದ್ದಾರೆ ಗರ್ಭಿಣಿಯರು | Oneindia Kannada

ಮೂರು ಪಟ್ಟಿಕೆಗಳಿರುವ ಶಿಲ್ಪವಾಗಿದ್ದು, ಮೂವರು ವೀರರಿಗೂ ಎದುರು ಇರುವ ಇಬ್ಬರು ವೀರರಿಗೂ ಹೋರಾಟದ ದೃಶ್ಯವಿದೆ. ಇವರಲ್ಲಿ ಇಬ್ಬರು ಅಶ್ವಾರೋಹಿಗಳಾಗಿದ್ದು ಕೈಯಲ್ಲಿ ಈಟಿಯಂಥ ಆಯುಧಗಳಿವೆ ಎಂದರು.

 ಮಳೆಗಾಲ ಬರುತ್ತಿದೆ, ಭಾಗಮಂಡಲದಲ್ಲಿ ಇನ್ನೂ ನಿರ್ಮಾಣವಾಗಿಲ್ಲ ಈ ಸೇತುವೆ ಮಳೆಗಾಲ ಬರುತ್ತಿದೆ, ಭಾಗಮಂಡಲದಲ್ಲಿ ಇನ್ನೂ ನಿರ್ಮಾಣವಾಗಿಲ್ಲ ಈ ಸೇತುವೆ

ಇನ್ನಿಬ್ಬರು ಯೋಧರ ಕೈಯಲ್ಲಿ ಖಡ್ಗ, ಗುರಾಣಿಗಳಿವೆ. ಉಳಿದೊಬ್ಬ ಬಿಲ್ಲಿಗೆ ಬಾಣಹೂಡಿ ಬಿಡುತ್ತಿದಾನೆ. ಎಲ್ಲರೂ ಚಲನೆಯ ಸ್ಥಿತಿಯಲ್ಲಿರುವ ಶಾಸನ ಪತ್ತೆಯಾಗಿದೆ. ಮಧ್ಯದ ಪಟ್ಟಿಕೆಯಲ್ಲಿ ಮೃತ ವೀರ, ಪುಷ್ಪಕ ವಿಮಾನದಲ್ಲಿ ಕುಳಿತ ಭಂಗಿಯಲ್ಲಿದ್ದು, ಉಭಯ ಪಾರ್ಶ್ವಗಳಲ್ಲಿ ಚಾಮರ ಧಾರಿಣಿ ಅಪ್ಸರೆಯರು ಆಕಾಶದಲ್ಲಿ ಹಾರುವಂತೆ ಚಿತ್ರಿತವಾಗಿದೆ. ಮೊದಲ ಪಟ್ಟಿಕೆಯಲ್ಲಿ ಚಂದ್ರ, ಸೂರ್ಯ, ಬಸವ ಸ್ತಂಭ ಶಿವಲಿಂಗ ಕೈ ಮುಗಿದು ಕುಳಿತಿರುವ ವ್ಯಕ್ತಿ ಹಾಗೂ ಕಳಶ ಕೆತ್ತನೆಗಳಿವೆ.

ಬೆಳಗಾವಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ವೇಳೆ ಪುರಾತನ ಶಿಲಾ ಶಾಸನ ಪತ್ತೆಬೆಳಗಾವಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ವೇಳೆ ಪುರಾತನ ಶಿಲಾ ಶಾಸನ ಪತ್ತೆ

An Inscription Dating Back To The Vijayanagara Empire Found In Kodagu

ಶಾಸನ ಶಿಲೆಯು ಸವೆದು ಹೋಗಿದ್ದು, ಲಿಪಿ ಲಕ್ಷಣಗಳನ್ನು ಆಧರಿಸಿ 15-16 ನೇ ಶತಮಾನಕ್ಕೆ ಸೇರಿದ್ದೆಂದು ಹೇಳಬಹುದಾಗಿದೆ. ಯಾವುದೇ ರಾಜವಂಶ ಅಥವಾ ಅರಸ ಪಾಳೇಗಾರರ ಉಲ್ಲೇಖವಿಲ್ಲ ಎಂದು ಬಿ.ಪಿ ರೇಖಾ ಅವರು ತಿಳಿಸಿದ್ದಾರೆ.

An Inscription Dating Back To The Vijayanagara Empire Found In Kodagu

ಶಾಸನಪತ್ತೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಜೆ ಯಾಧವ, ಶಾಸನ ತಜ್ಞರಾದ ಮೈಸೂರಿನ ಡಾ.ಎಚ್.ಎಂ ನಾಗರಾಜ್ ರಾವ್ ಹಾಗೂ ಸ್ಥಳೀಯರು ಸಹಕರಿಸಿದ್ದಾರೆ. ಶಾಸನವನ್ನು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ.ರೇಖಾ ಅವರು ಸಂಗ್ರಹಿಸಿದ್ದಾರೆ.

English summary
An Inscription dating back to the Vijayanagara kings was found near Yadavanadu in Somavarapet taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X