ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವೇರಿ ತೀರ್ಥೋದ್ಭವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

By Yashaswini
|
Google Oneindia Kannada News

ಮಡಿಕೇರಿ, ಅಕ್ಟೋಬರ್ 17: ಜೀವನದಿ ಕಾವೇರಿ ಉಗಮ ಸ್ಥಳ, ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಕಾವೇರಿ ತೀರ್ಥರೂಪಿಣಿ ಆಗಿ ಭಕ್ತರಿಗೆ ಒಲಿದಳು. ವರ್ಷಕ್ಕೊಮ್ಮೆ ನಡೆಯುವ ಈ ಕ್ಷಣಕ್ಕೆ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ಸಾಕ್ಷಿಯಾದರು.

ಕೆಲವೇ ಕ್ಷಣಗಳಲ್ಲಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಕೆಲವೇ ಕ್ಷಣಗಳಲ್ಲಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ

ತೀರ್ಥೋದ್ಭವವಾದ ಬಳಿಕ ತೀರ್ಥ ಕೊಂಡೊಯ್ಯಲು ಭಕ್ತರು ಮುಗಿಬಿದ್ದರು. ಇದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು. 18 ಮಂದಿ ಅರ್ಚಕರು ಮಹಾಪೂಜೆ ನೆರವೇರಿಸಿದರು. ಕುಂಕುಮಾರ್ಚನೆ, ಅಭಿಷೇಕ ನಡೆದ ಬಳಿಕ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಉಕ್ಕಿದಳು. ಈ ಸಂದರ್ಭ ಜಯಘೋಷಗಳು ಮೊಳಗಿದವು.

Annual theerthodbhava of river Cauvery occured at the holy pond

ಚಿನ್ನಾಭರಣದೊಂದಿಗೆ ಕಾವೇರಿ ಮಾತೆ ಕಂಗೊಳಿಸುತ್ತಿದ್ದಳು. ಕ್ಷೇತ್ರದ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ನೇತೃತ್ವದಲ್ಲಿ ಸಂಪ್ರದಾಯಿಕ ಪೂಜೆಗಳನ್ನು ನೆರವೇರಿಸಲಾಯಿತು. ಅರ್ಚಕರಾದ ಅನಂತಕೃಷ್ಣಾಚಾರ್, ರಾಮಕೃಷ್ಣಾಚಾರ್, ನಾರಾಯಣಾಚಾರ್ ಪಾಲ್ಗೊಂಡಿದ್ದರು.

ಗೀತಗಾಯನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೊಡಗು ಏಕೀಕರಣ ರಂಗವು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಿತ್ತು. ಜತೆಗೆ ಮಂಡ್ಯದ ರೈತರು ಅಕ್ಕಿ, ಬೆಲ್ಲ, ತೆಂಗಿನಕಾಯಿ ಕಳುಹಿಸಿದ್ದರು.

ಭಕ್ತರ ಪರದಾಟ: ಭಾಗಮಂಡಲದಿಂದ ತಲಕಾವೇರಿಗೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿತ್ತು. ಇದರಿಂದ ಭಕ್ತರು ಪರದಾಟ ನಡೆಸಬೇಕಾದ ಸ್ಥಿತಿಯಿತ್ತು.
ಭಾಗಮಂಡಲದ ಭಗಂಡೇಶ್ವರನ ದೇಗುಲದಲ್ಲೂ ತುಲಾ ಸಂಕ್ರಮಣ ಜಾತ್ರೆಯ ಸಂಭ್ರಮ ಮನೆ ಮಾಡಿತ್ತು. ಕಾವೇರಿ, ಸುಜ್ಯೋತಿ ಹಾಗೂ ಕನ್ನಿಕೆ ನದಿಯ ಸಂಗಮದ ಸ್ಥಳದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು. ನೂರಾರು ಮಂದಿ ಪಿಂಡ ಪ್ರದಾನ ಮಾಡಿದರು.

English summary
The annual theerthodbhava of river Cauvery occured at the holy pond at its birth place Talakavery at 12.15am on October 17. Thousands of devotees witnessed the moment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X