ಕೊಡಗು: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಡಿಕೇರಿ, ಮೇ 07: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನಯ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 18,150 ರೂ. ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ.
2025-26ನೇ ಸಾಲಿಗೆ ಡಾ. ಎ. ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿಗೆ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿಜ್ಞಾನ ವಿಭಾಗದ ಭೌತಶಾಸ್ತ್ರ ಉಪನ್ಯಾಸಕರು-1, ಗಣಿತ ಉಪನ್ಯಾಸಕರು-1 ಮತ್ತು ವಿಜ್ಞಾನ ಶಿಕ್ಷಕರು-1 ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದೆ.
ವಿಜ್ಞಾನ ವಿಭಾಗದ ಭೌತಶಾಸ್ತ್ರ ಉಪನ್ಯಾಸಕರು ಮತ್ತು ಗಣಿತ ಉಪನ್ಯಾಸಕರ ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ/ ಬಿ.ಇಡಿ ಮತ್ತು ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ, ಬಿ.ಇಡಿ (ಸಿಬಿಜೆಡ್) ವಿದ್ಯಾರ್ಹತೆ ಹೊಂದಿರಬೇಕು. ವೇತನ ಶ್ರೇಣಿ ರೂ.18,150. ಅರ್ಜಿ ಸಲ್ಲಿಸಲು ಮೇ, 17 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ಹೇಳಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-225528, 9686138688.
ಪ್ರಾಂಶುಪಾಲರು, ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ 7676473767 ಅನ್ನು ಸಂಪರ್ಕಿಸಬಹುದು.
ತರಬೇತಿಗೆ ಅರ್ಜಿ ಆಹ್ವಾನ: ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ.
ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಅಭ್ಯರ್ಥಿಗಳು ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಸಂಪರ್ಕಿಸಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08274-200221 ಮತ್ತು 9036796935, 9880234243, 9945635160 ಹಾಗೂ 8971358220 ಅನ್ನು ಸಂಪರ್ಕಿಸಬಹುದು.
ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ: ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿನ ಕ್ರ.ಸಂ 04 ರಲ್ಲಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇರವಾಗಿ ಸಲ್ಲಿಸಬಹುದು.












Click it and Unblock the Notifications