ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೇನೆಗೆ ಸೇರಲು ಮುಗಿಬಿದ್ದ ಯುವಕರ ದಂಡು: ದೇಶದ ಗಡಿ ಕಾಯುವ ಉತ್ಸಾಹ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 14: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರಂತಹ ವೀರ ಸೇನಾನಿಗಳನ್ನು ದೇಶಕ್ಕೆ ನೀಡಿದ ಯೋಧರ ನಾಡು ಕೊಡಗಿನಲ್ಲಿ ಸೇನಾ ಭರ್ತಿ rally ನಡೆಯುತ್ತಿದೆ. ದೇಶ ಸೇವೆ ಮಾಡಬೇಕು ಮತ್ತು ಗಡಿಯಲ್ಲಿ ದೇಶವನ್ನು ಕಾಯಬೇಕೆನ್ನುವ ಉತ್ಸಾಹದಿಂದ ಸಾವಿರಾರು ಯುವಕರು ಸೇನಾ ಭರ್ತಿಗಾಗಿ ಮುಗಿ ಬೀಳುತ್ತಿದ್ದಾರೆ.

ಭಾರತೀಯ ಸೇನೆಯಲ್ಲಿ 152 ಧಾರ್ಮಿಕ ಗುರುಗಳ ಹುದ್ದೆಗಳಿವೆಭಾರತೀಯ ಸೇನೆಯಲ್ಲಿ 152 ಧಾರ್ಮಿಕ ಗುರುಗಳ ಹುದ್ದೆಗಳಿವೆ

ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ rallyಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ. ದೇಶಕ್ಕಾಗಿ ಪ್ರಾಣ ನೀಡಲು ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.

Army Recruitment Rally In Madikeri

ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸೇನಾ ನೇಮಕಾತಿ rallyಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.

ಭಾರತೀಯ ವಾಯು ಸೇನೆಯ ಮುಂದಿನ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾಭಾರತೀಯ ವಾಯು ಸೇನೆಯ ಮುಂದಿನ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾ

ಸೇನಾ ನೇಮಕಾತಿ rally ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಮೂಲ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

English summary
Thousands of youths have arrived to participate in the six day military rally at General Thimmaiah District Stadium in Madikeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X