ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿ : ವಿದ್ಯುತ್ ವ್ಯವಸ್ಥೆ ಮಾಡುವುದು ಚೆಸ್ಕಾಂಗೆ ದೊಡ್ಡ ಸವಾಲು

By Gururaj
|
Google Oneindia Kannada News

ಮಡಿಕೇರಿ, ಆಗಸ್ಟ್ 23 : ಭಾರಿ ಮಳೆ, ಗುಡ್ಡ ಕುಸಿತದ ಬಳಿಕ ಮಡಿಕೇರಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಮಡಿಕೇರಿಯ ಹಲವು ಗ್ರಾಮಗಳು ವಿದ್ಯುತ್ ಸಂಪರ್ಕ ಕಡಿದುಕೊಂಡಿವೆ. ವಿದ್ಯುತ್ ವ್ಯವಸ್ಥೆ ಸರಿಪಡಿಸಲು ಚೆಸ್ಕಾಂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ) ನ 50 ಮಂದಿಯ ತಂಡ ಮಡಿಕೇರಿಯ ವಿವಿಧ ಭಾಗದಲ್ಲಿ ಬೀಡುಬಿಟ್ಟಿದ್ದು, ವಿದ್ಯುತ್ ವ್ಯವಸ್ಥೆ ಸರಿಪಡಿಸಲು ಕಾರ್ಯ ನಿರ್ವಹಣೆ ಮಾಡುತ್ತಿದೆ. ಸ್ಥಳೀಯರು ಕೈ ಜೋಡಿಸಿದ್ದಾರೆ.

ಕೊಡಗು ಮತ್ತೆ ಕಟ್ಟಲು ಸರ್ಕಾರದಿಂದ ಸಮರೋಪಾದಿ ಕಾರ್ಯ: ಸಿಎಂಕೊಡಗು ಮತ್ತೆ ಕಟ್ಟಲು ಸರ್ಕಾರದಿಂದ ಸಮರೋಪಾದಿ ಕಾರ್ಯ: ಸಿಎಂ

ಕೊಡಗಿನ 10 ಗ್ರಾಮ ಪಂಚಾಯಿತಿ ಪ್ರದೇಶದಲ್ಲಿ ವಿದ್ಯುತ್ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಮಡಿಕೇರಿ ತಾಲೂಕಿನಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಸುಂಠಿಕೊಪ್ಪ, ಮಡಿಕೇರಿ ಟೌನ್ ಸುತ್ತ-ಮುತ್ತ ವಿದ್ಯುತ್ ಕಂಬಗಳು ಮಣ್ಣಿನಲ್ಲಿ ಕೊಚ್ಚಿ ಹೋಗಿವೆ.

Big challenge for CESCOM to restore power supply in Madikeri

ವಿದ್ಯುತ್ ವ್ಯವಸ್ಥೆ ಸರಿಪಡಿಸುವುದು ಲೈನ್ ಮೆನ್‌ಗಳಿಗೆ ಭಾರೀ ಸವಾಲಿನ ಕೆಲಸವಾಗಿದೆ. ರಸ್ತೆಗಳು ಕೊಚ್ಚಿ ಹೋಗಿದ್ದರಿಂದ ಪರಿಕರಗಳನ್ನು ಹೊತ್ತು ಅವರು ಸುಮಾರು 7 ಕಿ.ಮೀ.ಗುಡ್ಡ ಹತ್ತಿ ನಡೆಯಬೇಕಿದೆ. ಸುಮಾರುವ 3,500 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅವುಗಳನ್ನು ಪುನಃ ಸ್ಥಾಪಿಸಿ, ವಿದ್ಯುತ್ ಸಂಪರ್ಕ ನೀಡಬೇಕಿದೆ.

ಮಡಿಕೇರಿ : ವೈರಲ್ ಆಗಿರುವ ಮನೆ ಕುಸಿತದ ವಿಡಿಯೋ ಹಿಂದಿನ ಕಥೆ!ಮಡಿಕೇರಿ : ವೈರಲ್ ಆಗಿರುವ ಮನೆ ಕುಸಿತದ ವಿಡಿಯೋ ಹಿಂದಿನ ಕಥೆ!

ಚೆಸ್ಕಾಂ ಇಂಜಿನಿಯರ್ ಮತ್ತು ಲೈನ್‌ ಮೆನ್‌ಗಳು ವಿದ್ಯುತ್ ವ್ಯವಸ್ಥೆ ಸರಿಪಡಿಸಲು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಸ್ಥಳೀಯರು ಸಹ ವಿದ್ಯುತ್ ಇಲಾಖೆ ಜೊತೆ ಕೈ ಜೋಡಿಸಿದ್ದಾರೆ. ಆದರೆ, ವಿದ್ಯುತ್ ವ್ಯವಸ್ಥೆ ಸರಿಪಡಿಸಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.

English summary
It's challenge for the engineers and linemen from Chamundeshwari Electricity Supply Company to restore power supply in the Kodagu district. As many as 3500 electricity polls damaged due to rain and landslide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X