• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಹೋಗೋದು ಒಳ್ಳೆಯದು: ಎ ಮಂಜು

|

ಕೊಡಗು, ಜೂನ್ 4: ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿರುವುದರಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಬಿಜೆಪಿ ಮುಖಂಡ ಎ. ಮಂಜು ಹೇಳಿದರು.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಹೀಗಾಗಿ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಹೇಳಿದರು.

ಹಾಸನದಲ್ಲಿ ತಮ್ಮ ಸೋಲು, ಪ್ರಜ್ವಲ್ ಗೆಲುವಿನ ಬಗ್ಗೆ ಎ ಮಂಜು ಹೇಳಿದ್ದೇನು?

ರಾಮಲಿಂಗಾರೆಡ್ಡಿ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 'ಕಾಂಗ್ರೆಸ್‌ನಲ್ಲಿ ಜೀ ಹುಜೂರ್ ಎನ್ನುವವರಿಗೆ ಮಾತ್ರ ಅವಕಾಶ ಸಿಗುತ್ತದೆ. ಅಲ್ಲಿ ಹಿರಿಯ ನಾಯಕರಿಗೆ ಗೌರವ ಸಿಗುತ್ತಿಲ್ಲ. ಪಕ್ಷ ಕಟ್ಟಿ ಬೆಳೆಸಿದವರಿಗೆ ಸೂಕ್ತ ಸ್ಥಾನಮಾನ ಕೊಡುವುದಿಲ್ಲ ಎಂದು ಟೀಕಿಸಿದರು.

ಎ. ಮಂಜು ಅವರು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

ಇಳಿದು ಬಾ, ಇಳಿದು ಬಾ... ಸಿದ್ದರಾಮಯ್ಯಗೆ ಅಹಂಕಾರ ಇಳಿಯಿತೇ?: ರೋಷನ್ ಬೇಗ್

ಪಕ್ಷ ತಮ್ಮನ್ನು ಕಡೆಗಣಿಸುತ್ತಿದೆ ಎಂದು ಅಸಮಾಧಾನಗೊಂಡಿದ್ದ ಮಾಜಿ ಸಚಿವ ಮಂಜು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದಕ್ಕೆ ಆಕ್ರೋಶಗೊಂಡು ಪಕ್ಷ ತೊರೆದು ಬಿಜೆಪಿ ಸೇರಿಕೊಂಡಿದ್ದರು.

English summary
BJP leader A Manju said in Kodagu that, BJP has won more seats in the Centre and in the state. Its better to Chief Minister HD Kumaraswamy resign for his post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X