ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಲಿ ಸೆರೆಗೆ ಒತ್ತಾಯಿಸಿ ಪೊನ್ನಂಪೇಟೆ ಬಂದ್‌; ಉತ್ತಮ ಬೆಂಬಲ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮಾರ್ಚ್ 11; ನರಹಂತಕ ಹುಲಿಯನ್ನು ಸೆರೆಹಿಡಿಯುವಲ್ಲಿ ಅಥವಾ ಗುಂಡು ಹೊಡೆದು ಸಾಯಿಸುವಲ್ಲಿ ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಬುಧವಾರ ಹೆದ್ದಾರಿ ತಡೆ ಮಾಡಲಾಗಿತ್ತು. ಇಂದು ಪೊನ್ನಂಪೇಟೆ ತಾಲೂಕು ಬಂದ್ ಕರೆ ನೀಡಲಾಗಿದೆ.

ಗುರುವಾರ ವಿವಿಧ ಸಂಘ ಸಂಸ್ಥೆಗಳು ಹಾಗೂ ಬೆಳೆಗಾರರ ಸಹಕಾರದೊಂದಿಗೆ ರಾಜ್ಯ ರೈತಸಂಘ ಕರೆ ನೀಡಿರುವ ಪೊನ್ನಂಪೇಟೆ ತಾಲೂಕು ಬಂದ್‌ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಕುಟ್ಟಾ, ಶ್ರೀಮಂಗಲ, ಟಿ. ಶೆಟ್ಟಿಗೇರಿ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ ಭಾಗದಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ.

ಹುಲಿ ಮದುವೆ ಮಾಡಿಕೊಳ್ಳುತ್ತೇವೆ: ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನರಭಕ್ಷಕ ಹುಲಿ ದಾಳಿಹುಲಿ ಮದುವೆ ಮಾಡಿಕೊಳ್ಳುತ್ತೇವೆ: ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನರಭಕ್ಷಕ ಹುಲಿ ದಾಳಿ

ವಾಹನ ಸಂಚಾರ ಕೂಡ ವಿರಳವಾಗಿದೆ. ನರಹಂತಕ ಹುಲಿಯನ್ನು ಗುಂಡು ಹೊಡೆದು ಸಾಯಿಸಬೇಕು ಎಂದು ಇಂದು ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಬಂದ್ ಕರೆ ನೀಡಲಾಗಿದೆ. ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಮಡಿಕೇರಿ; ಹುಲಿ ಸೆರೆ ಅಸಾಧ್ಯವಾದರೆ ಮಾತ್ರ ಕಂಡಲ್ಲಿ ಗುಂಡು ಮಡಿಕೇರಿ; ಹುಲಿ ಸೆರೆ ಅಸಾಧ್ಯವಾದರೆ ಮಾತ್ರ ಕಂಡಲ್ಲಿ ಗುಂಡು

Capture Of Man Eater Tiger Good Response For Ponnampet Bandh

ನರಭಕ್ಷಕ ಹುಲಿಯನ್ನು ಹಿಡಿಯಲು ಒತ್ತಾಯಿಸಿ ಎರಡು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘದ ಪದಾಧಿಕಾರಿಗಳು ಬುಧವಾರ ಮೈಸೂರು-ಗೋಣಿಕೊಪ್ಪ ರಾಜ್ಯ ಹೆದ್ದಾರಿ ತಡೆದಿದ್ದರು. ಮತ್ತಿಗೋಡು ವನ್ಯಜೀವಿ ವಿಭಾಗದ ಅರಣ್ಯ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಿದ್ದರು.

ಮಡಿಕೇರಿ; ಹುಲಿ ಸೆರೆ ಸಿಕ್ಕಿಲ್ಲ, ಅರಣ್ಯ ಇಲಾಖೆಯ ಶತ ಪ್ರಯತ್ನ ಮಡಿಕೇರಿ; ಹುಲಿ ಸೆರೆ ಸಿಕ್ಕಿಲ್ಲ, ಅರಣ್ಯ ಇಲಾಖೆಯ ಶತ ಪ್ರಯತ್ನ

Capture Of Man Eater Tiger Good Response For Ponnampet Bandh

ಬುಧವಾರ ಪೊನ್ನಂಪೇಟೆ ಮತ್ತು ಗೋಣಿಕೊಪ್ಪಲುವಿನಲ್ಲಿ ಮಾನವ ಸರಪಳಿ ರಚಿಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಗಿತ್ತು. ಮೂವರನ್ನು ಕೊಂದಿರುವ ಹುಲಿ ಬಗ್ಗೆ ವಿಧಾನಸಭೆಯಲ್ಲಿಯೂ ಚರ್ಚೆ ನಡೆದಿತ್ತು.

Recommended Video

ST Somashekhar ಬಿಚ್ಚಿಟ್ಟ ಅಸಲಿ ಸತ್ಯ | Real Fact about Ramesh Jarkiholi | Oneindia Kannada

ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಶ್ರಮಿಸುತ್ತಿದ್ದರೂ ಹುಲಿಯನ್ನು ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಜೀವಂತವಾಗಿ ಸೆರೆ ಹಿಡಿಯಲು ಆಗದಿದ್ದರೆ ಕಂಡಲ್ಲಿ ಗುಂಡಿಕ್ಕಲು ಸಹ ಆದೇಶ ಹೊರಡಿಸಲಾಗಿದೆ. ಮೂವರ ಜೀವವನ್ನು ಹುಲಿ ಬಲಿಪಡೆದಿದ್ದು, ಜನರೂ ಜೀವ ಭಯದಲ್ಲೇ ಬದುಕುತ್ತಿದ್ದಾರೆ. ಕತ್ತಲಾದ ಮೇಲೆ ಯಾರೂ ಮನೆಯಿಂದ ಹೊರಗೆ ಬರುತ್ತಿಲ್ಲ. ತೋಟಗಳಲ್ಲಿ ಕೆಲಸಗಳನ್ನು ಸಹ ನಿಲ್ಲಿಸಲಾಗಿದೆ.

English summary
Various organizations called for Ponnampet, Kodagu bandh against forest department officials who fail to capture man eater tiger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X