ಕಾವೇರಿ ನದಿಗೆ ಜೀವಕಳೆ; ಕೊಡಗಿನಲ್ಲಿ ಸುರಿದ ಮಳೆ ಎಷ್ಟು?

ಮಡಿಕೇರಿ, ಮೇ 18: ಕರ್ನಾಟಕದ ವಿವಿವಿಧ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ. ಮೇ 20ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ನದಿ ಪಾತ್ರದಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿಗೆ ಜೀವಕಳೆ ಬಂದಿದೆ.

ಬರ, ಬಿರು ಬೇಸಿಗೆಯ ಪರಿಣಾಮ ಕೊಡಗಿನಲ್ಲಿಯೇ ಕರ್ನಾಟಕದ ಜೀವನದಿ ಕಾವೇರಿ ಹರಿವು ನಿಲ್ಲಿಸಿ ಬತ್ತಿ ಹೋಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕಾವೇರಿ ನದಿಯ ಚಿತ್ರಗಳು ವೈರಲ್ ಆಗಿದ್ದವು. ಮಳೆ ಬಂದರೆ ಸಾಕು ಎಂದು ಜನರು ಪ್ರಾರ್ಥಿಸುತ್ತಿದ್ದರು.

Cauvery River Regains Glory Thanks To Pre Monsoon Rain

ಕೊಡಗು ಜಿಲ್ಲೆ, ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ಹಳ್ಳಕೊಳ್ಳಗಳು ಹರಿಯಲು ಆರಂಭಿಸಿದ್ದು, ನೀರು ಕಾವೇರಿ ನದಿ ಸೇರುತ್ತಿದೆ. ಇದರಿಂದಾಗಿ ಕಾವೇರಿಗೆ ಜೀವಕಳೆ ಮರಳಿದ್ದು, ಕೆಆರ್‌ಎಸ್ ಜಲಾಶಯಕ್ಕೂ ನೀರಿನ ಒಳಹರಿವು ಹೆಚ್ಚಿದೆ.

ಕೊಡಗಿನಲ್ಲಿ ಸುರಿದ ಮಳೆ ಎಷ್ಟು?: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 20.15 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಸುರಿದ ಮಳೆ 150.74 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 112.72 ಮಿ. ಮೀ. ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 39.50 ಮಿ. ಮೀ. ಕಳೆದ ವರ್ಷ ಇದೇ ದಿನ 0.00 ಮಿ. ಮೀ. ಮತ್ತು ಜನವರಿಯಿಂದ ಇಲ್ಲಿಯವರೆಗಿನ ಮಳೆ 206.31 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 160.65 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ 20.75 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 92.45 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 71.01 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ 3.40 ಮಿ.ಮೀ. ಮಳೆಯಾಗಿದೆ. ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 133.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 76.94 ಮಿ.ಮೀ. ಮಳೆಯಾಗಿತ್ತು ಎಂದು ಅಂಕಿ ಸಂಖ್ಯೆ ಹೇಳುತ್ತಿದೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ 19.80 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 113.05 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 94.11 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ 17.30 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 208.10 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 160.90 ಮಿ.ಮೀ. ಮಳೆಯಾಗಿತ್ತು.

ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ಮಡಿಕೇರಿ ಕಸಬಾ 10.50, ನಾಪೋಕ್ಲು 25.20, ಸಂಪಾಜೆ 49.50, ಭಾಗಮಂಡಲ 71, ವಿರಾಜಪೇಟೆ ಕಸಬಾ 27, ಅಮ್ಮತ್ತಿ 14.50, ಹುದಿಕೇರಿ 10.20, ಶ್ರೀಮಂಗಲ 3.40, ಸೋಮವಾರಪೇಟೆ ಕಸಬಾ 5, ಶನಿವಾರಸಂತೆ 54, ಶಾಂತಳ್ಳಿ 10, ಕೊಡ್ಲಿಪೇಟೆ 10.20, ಕುಶಾಲನಗರ 30.40, ಸುಂಟಿಕೊಪ್ಪ 4.20 ಮಿ.ಮೀ. ಮಳೆಯಾಗಿದೆ.

ಹಾರಂಗಿ ಡ್ಯಾಂ ನೀರಿನ ಮಟ್ಟ: ಕೊಡಗು ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ನೀರಿನ ಮಟ್ಟ 17/05/2024ರಂತೆ 2822.90 ಅಡಿಗಳು. ಕಳೆದ ವರ್ಷ ಇದೇ ದಿನ 2819.80 ಅಡಿ ನೀರಿನ ಸಂಗ್ರವಿತ್ತು.

ಹಾರಂಗಿಯಲ್ಲಿ ಬಿದ್ದ ಮಳೆ 32.20 ಮಿ.ಮೀ., ನೀರಿನ ಒಳಹರಿವು 203 ಕ್ಯುಸೆಕ್, ಕಳೆದ ವರ್ಷ ಇದೇ ದಿನ 70 ಕ್ಯುಸೆಕ್. ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್ ಮತ್ತು ನಾಲೆಗೆ 40 ಕ್ಯುಸೆಕ್ ಆಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+