ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಲಕಾವೇರಿಯಲ್ಲಿ ದರ್ಶನ ಕೊಟ್ಟ ತೀರ್ಥರೂಪಿಣಿ ಕಾವೇರಿ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 17: ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಬೆಳಿಗ್ಗೆ 7.03 ನಿಮಿಷಕ್ಕೆ ಕನ್ಯಾರಾಶಿಯಲ್ಲಿ ತೀರ್ಥೋದ್ಭವವಾಗಿದೆ.

ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.

Kodagu: Cauvery Teerthodbhava At Talakaveri

ತಳಿಯತಕ್ಕಿ ಬೊಳಕ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕ್ಷೀಣವಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜಿಸಲಾಗಿದೆ.

ಪವಿತ್ರ ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಇತರ ಗಣ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಪ್ರವೇಶಿಸುವವರಿಗೆ ಜಿಲ್ಲಾಡಳಿತ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದ್ದು, ಹೊರ ಜಿಲ್ಲೆಯ ಭಕ್ತರು ಈ ಬಾರಿ ಇರಲಿಲ್ಲ. ಕುಂಡಿಕೆಯಿಂದ ಈ ಬಾರಿ ತೀರ್ಥ ಪಡೆಯಲು ಅವಕಾಶವಿಲ್ಲ. ದೇವಾಲಯ ಸಮಿತಿಯಿಂದ ಪ್ರತ್ಯೇಕ ಸ್ಥಳದಲ್ಲಿ ತೀರ್ಥ ನೀಡಲಾಗುತ್ತಿದೆ. ಬ್ರಹ್ಮ ಕುಂಡಿಕೆ ಮುಂದಿನ ಕೊಳದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ನೀಡಲಾಗಿಲ್ಲ.

Recommended Video

Political Popcorn with Lavanya : Dr BL Shankar, ನನ್ ಜೀವನದಲ್ಲಿ ನಾನು ಮಾಡಿದ ಎರಡು ತಪ್ಪು ಯಾವುದು ಗೊತ್ತಾ??

ಇದೇ ಸಂದರ್ಭ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಈ ಬಾರಿ ಕೊರೊನಾ ಕಾರಣದಿಂದಾಗಿ ತಲಕಾವೇರಿ ಕ್ಷೇತ್ರಕ್ಕೆ ಭಕ್ತರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಇರಲಿಲ್ಲ. ಜನರ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಜಾರಿಗೊಳಿಸಲೇಬೇಕಾದ ಅನಿವಾರ್ಯತೆಯಿತ್ತು. ಯಾರಿಗೇ ನೋವಾಗಿದ್ದರೂ ಸರ್ಕಾರದ ಪರವಾಗಿ ಕ್ಷಮೆ ಕೋರುತ್ತೇನೆ. ವ್ಯವಸ್ಥಿತವಾಗಿ, ಸುಸೂತ್ರವಾಗಿ ತಲಕಾವೇರಿಯಲ್ಲಿ ತೀರ್ಥೋದ್ಭವ ಕಾರ್ಯಕ್ರಮ ನಡೆದಿದೆ. ನೂರಾರು ವರ್ಷಗಳಿಂದ ನಡೆದು ಬಂದ ಸಂಪ್ರದಾಯವನ್ನು ಸಣ್ಣ ಅಪಚಾರವೂ ನಡೆಯದಂತೆ ಇಂದು ನಡೆಸಲಾಗಿದೆ. ಇಂದಿನ ಸಂದಿಗ್ಧತೆಯು ಮುಂದಿನ ದಿನಗಳಲ್ಲಿ ನಾಡಿಗೆ ಬಾರಂದಂತೆ ತಾಯಿ ಕಾವೇರಿಯಲ್ಲಿ ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.

English summary
Cauvery teerthodbhava happened at talakaveri today morning at 7.03
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X