ತಲಕಾವೇರಿಯಲ್ಲಿ ಅ.17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ

ಮಡಿಕೇರಿ, ಸೆಪ್ಟೆಂಬರ್ 22: ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ.

ತಲಕಾವೇರಿಯ ತೀರ್ಥೋದ್ಭವದ ಕುರಿತು ಶ್ರೀ ತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು.

ಅಕ್ಟೋಬರ್ 4 ರಂದು ಬೆಳಿಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುವುದು.

Madikeri: Cauvery Theerthodbhava On October 17

ಅ.14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವುದು, ಅ.17 ರಂದು ಶನಿವಾರ ಬೆಳಿಗ್ಗೆ 7.03 ಗಂಟೆಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀರ್ಥೋದ್ಭವವಾಗಲಿದೆ ಎಂದು ತಿಳಿಸಿದ್ದಾರೆ.

ತೀರ್ಥೋದ್ಭವದ ನಂತರ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಭಕ್ತಾದಿಗಳ ಪುಣ್ಯ ಸ್ನಾನಕ್ಕೆ ಅಗತ್ಯ ವ್ಯವಸ್ಥೆಯನ್ನು ದೇವಾಲಯದ ಆಡಳಿತ ಮಂಡಳಿ ಸ್ಥಳದಲ್ಲಿ ಕಲ್ಪಿಸಿರುತ್ತದೆ.

Madikeri: Cauvery Theerthodbhava On October 17

ಇಲ್ಲಿದೆ ವಸ್ತ್ರ ಸಂಹಿತೆ ಕ್ಷೇತ್ರಕ್ಕೆ ಬರುವ ಭಕ್ತರು ತುಂಡುಡುಗೆ ತೊಡುವಂತಿಲ್ಲ. ಸ್ಲೀವ್ ಲೆಸ್, ಶಾರ್ಟ್ಸ್, ಪಾರದರ್ಶಕ ಬಟ್ಟೆ, ಬರ್ಮುಡಾ ತೊಟ್ಟು ಪುರುಷರು ಮಹಿಳೆಯರು ದೇಗುಲ ಪ್ರವೇಶಿಸುವಂತಿಲ್ಲ. ಇಂಥ ಉಡುಗೆ ತೊಟ್ಟವರನ್ನು ದೇವಾಲಯ ದ್ವಾರದಲ್ಲೇ ಸೆಕ್ಯೂರಿಟಿ ಗಾರ್ಡ್ ತಡೆಯುತ್ತಾರೆ.

Recommended Video

      Congress ನಾ ಮಹತ್ವದ ಹುದ್ದೆ ಈ ನಾಯಕರ ಪಾಲು!!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+