ಪ್ರತಾಪ್ ಸಿಂಹ ಎತ್ತಿದ್ದ ತಕರಾರಿಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ
Recommended Video

ಮಡಿಕೇರಿ, ಡಿಸೆಂಬರ್ 08: ನಿನ್ನೆ ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದ ಪ್ರತಾಪ್ ಸಿಂಹ ನಡುವೆ ನೆರೆ ಅನುದಾನ ವಿಷಯಕ್ಕೆ ವಾಗ್ವಾದ ನಡೆದ ಬೆನ್ನಲ್ಲೇ ಸಿಎಂ ಅವರು ನೆರೆ ಅನುದಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರದಿಂದ ಬಂದಿರುವ 546 ಕೋಟಿ ಅನುದಾಣ ಕೊಡಗಿಗೆ ಮಾತ್ರವಲ್ಲ ಅದು 8 ಜಿಲ್ಲೆಗಳ ನೆರೆ ಅವಘಡಕ್ಕೆ ಬಿಡುಗಡೆ ಆಗಿರುವ ಅನುದಾನ ಎಂದು ಮಾಹಿತಿ ನೀಡಿದರು. ನೆರೆ ಹಾವಳಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಇದೇ ಸಮಯದಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ನವೆಂಬರ್ 18 ರಂದು ರಾಜ್ಯಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ಪ್ರಕೃತಿ ವಿಕೋಪ ನಿಧಿಯಲ್ಲಿರುವ ಹಣದ ಪೈಕಿ 546 ಕೋಟಿ ರೂ.ಗಳನ್ನು 8 ಜಿಲ್ಲೆಗಳ ಪರಿಹಾರ ಕಾಮಗಾರಿಗಳಿಗೆ ಬಳಸುವಂತೆ ಸೂಚನೆ ನೀಡಿದೆ. ಖರ್ಚು ಮಾಡಿರುವ ಸಮಗ್ರ ವರದಿಯನ್ನು 3 ತಿಂಗಳೊಳಗಾಗಿ ಕೇಂದ್ರಕ್ಕೆ ತಲುಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದ ಕೆಲವರು ಕೊಡಗಿಗಾಗಿಯೇ 546 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಕೊಟ್ಟಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹ ಅವರನ್ನು ಕುಟುಕಿದರು.

ಪ್ರತಾಪ್ ಸಿಂಹ ತಕರಾರು ತೆಗೆದಿದ್ದರು
ನಿನ್ನೆ ಮಡಿಕೇರಿಯಲ್ಲಿ ನಡೆದ ವಸತಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಯಲ್ಲಿ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರ, ಕೇಂದ್ರದಿಂದ ಕೊಡಗಿಗೆ ಹಣ ಬಂದಿಲ್ಲ ಎನ್ನುತ್ತಿದೆ ಆದರೆ ಕೇಂದ್ರವು 546 ಕೋಟಿ ಅನುದಾನ ನೀಡಿದೆ ಎಂದು ವೇದಿಕೆಯಲ್ಲಿ ಹೇಳಿದ್ದರು. ಇದು ಸಿಎಂ ಅವರನ್ನು ಸಿಟ್ಟಿಗೇಳಿಸಿತ್ತು.

'ಸಂತ್ರಸ್ತರಿಗಾಗಿ ನಿಯಮಗಳನ್ನು ಬದಿಗೆ ಸರಿಸಿದ್ದೇವೆ'
ಕೊಡಗಿನ ವಿಷಯದಲ್ಲಿ ರಾಜ್ಯ ಸರ್ಕಾರವು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಗಳನ್ನು ಬದಿಗೆ ಸರಿಸಿ ಎಲ್ಲ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ದೊರಕುವಂತೆ ಕ್ರಮಕೈಗೊಳ್ಳಲಾಗುತ್ತಿದೆ. ಕೊಡಗಿಗಾಗಿ ರಾಜ್ಯ ಸರ್ಕಾರಿ ನೌಕರರು 103 ಕೋಟಿ, ಸಾರ್ವಜನಿಕರು ಮತ್ತು ಇತರ ಅಧೀನ ಸಂಸ್ಥೆಗಳು 180 ಕೋಟಿ ನೀಡಿದ್ದಾರೆ ಎಲ್ಲ ಹಣವನ್ನು ಎಲ್ಲೂ ಪೋಲಾಗದಂತೆ ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

10.5 ಲಕ್ಷದಲ್ಲಿ ಮನೆ
ಮಳೆ ಹಾನಿಯಲ್ಲಿ ಮನೆ ಕಳೆದುಕೊಂಡವರಿಗೆ 10.5 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ ಮನೆ ನಿರ್ಮಿಸಿಕೊಡಲಾಗುತ್ತದೆ. ಅದಕ್ಕೂ ಹೆಚ್ಚಿನ ವೆಚ್ಚವಾಗುವುದಾದರೆ ಅದನ್ನು ಫಲಾನುಭವಿಗಳೇ ಭರಿಸಬೇಕು. ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಶೆಡ್ಡುಗಳನ್ನು ನಿರ್ಮಿಸಲು ಸುಮಾರು 1 ಲಕ್ಷ ರೂ. ವೆಚ್ಚವಾಗುತ್ತದೆ. ಅದರ ಬದಲಾಗಿ ಪ್ರತಿ ತಿಂಗಳು 10 ಸಾವಿರ ರೂ. ಮನೆ ಬಾಡಿಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಲಕ್ಷಾಂತರ ಮೌಲ್ಯದ ವಸ್ತುಗಳು ಪೋಲು
ಕೊಡಗಿನ ಜನರಿಗಾಗಿ ಸಾರ್ವಜನಿಕರು ಕಳುಹಿಸಿದ್ದ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬಳಕೆಯಾಗಲಿಲ್ಲ ಎಂದು ವರದಿಗಳು ಪ್ರಕಟವಾಗಿವೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ಯಾವ ವಸ್ತುಗಳೂ ಸಹ ಅನುಪಯುಕ್ತ ಆಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications