ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನ ವಿವಿಧ ಪ್ರದೇಶದಲ್ಲಿ ಕೇಂದ್ರ ತಂಡದ ಪರಿಶೀಲನೆ

|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 13 : ಮಳೆ, ಭೂ ಕುಸಿತದಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಗೆ ಕೇಂದ್ರ ತಂಡ ಆಗಮಿಸಿದೆ. ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ತಂಡ, ಹಾನಿಯ ಪರಿಶೀಲನೆಯನ್ನು ನಡೆಸುತ್ತಿದೆ.

ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದ ತಂಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಅಭಿಯಂತರ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನುಸ್ವಾಮಿ ಅವರು ತಂಡದಲ್ಲಿದ್ದಾರೆ.

 Central team began the process of damage in Kodagu

ಕೊಡಗು ಪ್ರವಾಹ : ಹಾನಿಯ ಅಂದಾಜಿಗೆ ಬಂದ ಕೇಂದ್ರದ ತಂಡಕೊಡಗು ಪ್ರವಾಹ : ಹಾನಿಯ ಅಂದಾಜಿಗೆ ಬಂದ ಕೇಂದ್ರದ ತಂಡ

ಅತಿವೃಷ್ಟಿಯಿಂದ ಹಾನಿಗೀಡಾದ ಹಟ್ಟಿಹೊಳೆ, ಕಾಂಡನಕೊಲ್ಲಿ, ಹಾಲೇರಿ, ಮುಕ್ಕೋಡ್ಲು, ಜಂಬೂರು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಸಂಸದ ಪ್ರತಾಪ್ ಸಿಂಹ ಅವರು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಇದ್ದ ನಿರ್ಬಂಧ ತೆರವುಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಇದ್ದ ನಿರ್ಬಂಧ ತೆರವು

ವಿವಿಧ ಪ್ರದೇಶಗಳ ಭೇಟಿ ಬಳಿಕ ತಂಡದ ಅಧಿಕಾರಿಗಳು ಕುಶಾಲನಗರದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಜಿಲ್ಲಾಡಳಿತ ಮಾಹಿತಿ ನೀಡಿತು.

ಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿ

ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ ತಂಡದ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ವಿವರವಾದ ವರದಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಕೊಡಗು ಮತ್ತು ಅತಿವೃಷ್ಟಿಯಿಂದ ಹಾನಿಯಾಗ ಜಿಲ್ಲೆಗಳಿಗೆ 2 ಸಾವಿರ ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದರು.

English summary
A Central team led by Anil Malik Joint Secretary in the Ministry of Home Affairs began the process of assessing the damage caused by floods and landslide in Kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X