ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೇನಾ ವಿಮಾನದಲ್ಲಿ ಕೊಡಗು ಪ್ರವಾಹ ಸಮೀಕ್ಷೆಗೆ ಹೊರಟ ಎಚ್‌ಡಿಕೆ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 18: ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ಅರಂಭಿಸಿದ್ದಾರೆ. ಭಾರತೀಯ ಸೇನೆಗೆ ಸೇರಿದ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ವೈಮಾನಿಕ ಸಮೀಕ್ಷೆಗೆ ಹೊರಟಿದ್ದು ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ 1 ಗಂಟೆ 20 ನಿಮಿಷಗಳ ಕಾಲ ಸಮೀಕ್ಷೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಜತೆ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಜತೆಗಿದ್ದಾರೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಗೆ ಹೆಚ್ಚುವರಿ ಸೇನಾ ಸಿಬ್ಬಂದಿ ಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.

CM aerial survey in kodagu district

ಇದೇ ಸಂದಭದಲ್ಲಿ ಅಲ್ಲದೆ ಜಿಲ್ಲೆಯ ಪರಿಸ್ಥಿತಿ ಯನ್ನು ಅವಲೋಕಿಸಲು ವೈಮಾನಿಕ ಸಮೀಕ್ಷೆ ನಡೆಸಲು ವಾಯುಪಡೆಯ ಹೆಲಿಕಾಪ್ಟರ್ ಒಡಗಿಸುವಂತೆಯೂ ಮನವಿ ಮಾಡಿದ್ದರು, ಅದರಂತೆ ವೈಮಾನಿಕ ಸಮೀಕ್ಷೆಗೆ ಸೇನಾ ವಿಮಾನವನ್ನು ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ.

English summary
Chief minister H.D.Kumaraswamy has resumed aerial survey of flood and rain fed areas of Kodagu district in Indian army aircraft along with senior officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X