ಜ. 25ರಂದು ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಭೇಟಿ, ಬೇಡಿಕೆಗಳು

ಮಡಿಕೇರಿ, ಜನವರಿ 22: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 25ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಗೆ ಅಗತ್ಯವಿರುವ ಯೋಜನೆಗಳ ಕುರಿತು ಅವರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲು ಅಧಿಕಾರಿಗಳು ಸಭೆಯನ್ನು ನಡೆಸಿದರು.

ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎನ್. ವಿ. ಪ್ರಸಾದ್ ಮುಖ್ಯಮಂತ್ರಿಗಳ ಭೇಟಿ ಕುರಿತು ಮಾಹಿತಿ ನೀಡಿದ್ದಾರೆ. "ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ" ಎಂದು ಹೇಳಿದ್ದಾರೆ.

CM Siddaramaiah Kodagu Visit On January 25 Demands List

ಕೊಡಗು ಜಿಲ್ಲೆಗೆ ಅತ್ಯಗತ್ಯವಾಗಿ ಬೇಕಿರುವ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಪ್ರಸ್ತಾವನೆಗಳನ್ನು ಸಿದ್ಧಪಡಿಸುವಂತೆ ತಿಳಿಸಿದರು. ಸಭೆಯಲ್ಲಿಯೇ ಕೆಲವು ಪ್ರಸ್ತಾವನೆಗಳ ಕುರಿತು ಚರ್ಚೆಗಳು ನಡೆದವು.

ಪ್ರಸ್ತಾವನೆಗಳು ಯಾವುವು?; ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಇಲ್ಲದಿರುವುದರಿಂದ ಕಾನೂನು ಕಾಲೇಜು ಆರಂಭ ಸೇರಿದಂತೆ ಹಲವು ಯೋಜನೆಗಳ ಪ್ರಸ್ತಾವನೆಯನ್ನು ಪಟ್ಟಿ ಮಾಡಲಾಗುತ್ತಿದೆ. ಇದನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ ಎರಡು ವರ್ಷದವರೆಗೆ ಪ್ರತಿ ತಿಂಗಳು 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸೌಲಭ್ಯವಿದ್ದು, ಈ ಯೋಜನೆಗೆ ಜಿಲ್ಲೆಯಲ್ಲಿ ಅರ್ಹರು ಸಿಗುತ್ತಿಲ್ಲ ಎಂಬ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನ ಸೆಳೆದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ಫಿಜಿಯೋ ಥೆರಫಿ ಕಾಲೇಜು ಇಲ್ಲದಿರುವ ಬಗ್ಗೆ ಗಮನ ಸೆಳೆದ ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ, ಈ ಬಗ್ಗೆ ಸೇರಿದಂತೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು.

ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ 11 ಆಶ್ರಮ ಶಾಲೆ, 9 ವಿದ್ಯಾರ್ಥಿ ನಿಲಯ, ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಗೆಯೇ ಒಂದು ಏಕಲವ್ಯ ಮಾದರಿ ವಸತಿ ಶಾಲೆ ಇದೆ. 1,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ನಂತರ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ನಿಲಯ ಬೇಕು ಎಂದು ವಿವರಿಸಲಾಯಿತು.

ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹೀಗೆ ವಿವಿಧ ಇಲಾಖೆಗಳಿಗೆ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೂರ್ಗ್‍ಹನಿ ಹೆಸರಿನಲ್ಲಿ ನೋಂದಣಿಯಾಗದಿರುವವರು ಜೇನು ತುಪ್ಪ ಮಾರಾಟ ಮಾಡುತ್ತಿದ್ದು, ಈ ಸಂಬಂಧ 'ಜಿಐ ಟ್ಯಾಗ್' ಮಾಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲಹೆ ಮಾಡಿದರು. ಜೇನು ಕೃಷಿಕರು ಸಂಘಟನೆ ಮಾಡಿಕೊಂಡು ಕೂರ್ಗ್ ಹನಿ ಹೆಸರಿನಲ್ಲಿ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಗಮನಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎನ್. ವಿ. ಪ್ರಸಾದ್ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಪಡೆದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲಾಗಿದೆ. ಈ ಸಂಬಂಧ ಸಮಸ್ಯೆ ಇರುವುದನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ ಎಂದರು. ಸಭೆಯಲ್ಲಿ ಸರ್ಕಾರದ ಪ್ರಮುಖ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಪ್ರಗತಿ ಬಗ್ಗೆಯೂ ಚರ್ಚೆ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+