ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕು; ಹಸಿರು ವಲಯದಲ್ಲಿದ್ದ ಕೊಡಗು ರೆಡ್‌ ಝೋನ್‌ಗೆ ಬಂದಿದ್ದೇಗೆ?

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ ಮೇ 7: ಕಳೆದ ವರ್ಷದ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಹಸಿರು ಪಟ್ಟಿಯಲ್ಲಿದ್ದ ಪ್ರವಾಸಿ ಜಿಲ್ಲೆ ಕೊಡಗು ಈ ಬಾರಿ ದೇಶದಲ್ಲೇ ಆತ್ಯಂತ ತೀವ್ರ ಸೋಂಕು ಇರುವ ಜಿಲ್ಲೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಏಪ್ರಿಲ್ ಕೊನೆಯ ವಾರದಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರುಗತಿಯಲ್ಲಿದೆ. ಜಿಲ್ಲೆಯ ಪರಿಸ್ಥಿತಿ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಆತಂಕ ಮೂಡಿಸುತ್ತಿದ್ದು, ಗುರುವಾರದಂದು ಜಿಲ್ಲೆಯಲ್ಲಿ ಕೋವಿಡ್-19 ನಿಂದ 7 ಸಾವು ಸಂಭವಿಸಿದ್ದು, ಸಾವಿನ ಒಟ್ಟು ಸಂಖ್ಯೆ 152ಕ್ಕೆ ಏರಿಕೆಯಾಗಿದೆ.

"ರೋಗಿಗಳು ಆಸ್ಪತ್ರೆಗೆ ದಾಖಲಾಗುವುದಕ್ಕೆ ತೋರುತ್ತಿರುವ ವಿಳಂಬ ಇದಕ್ಕೆ ಕಾರಣ' ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಹೇಳಿದ್ದಾರೆ. ಮೇ 1 ರಿಂದ ಜಿಲ್ಲೆಯಲ್ಲಿ 42 ಸಾವು ಸಂಭವಿಸಿದ್ದು, ದಿನವೊಂದಕ್ಕೆ ಸರಾಸರಿ 6 ಸಾವು ವರದಿಯಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ, ಮಡಿಕೇರಿಯಲ್ಲಿರುವ, ಈಗಾಗಲೇ ಸೀಮಿತ ಸಾಮರ್ಥ್ಯ ಹೊಂದಿರುವ ಚಿತಾಗಾರಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ.

Coronavirus Cases In Kodagu: How Did District Moves From Green Zone To Red Zone

ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿರುವುದರಲ್ಲಿ ತೋರುತ್ತಿರುವ ವಿಳಂಬದ ಜೊತೆಗೆ ಕ್ರಿಟಿಕಲ್ ಕೇರ್ ವಿಭಾಗದಲ್ಲಿ ಸಿಬ್ಬಂದಿಯ ಕೊರತೆಯೂ ರೋಗಿಗಳ ಚಿಕಿತ್ಸೆ ಮೇಲೆ ಪರಿಣಾಮ ಬೀರುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 573 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 520 ಆರ್.ಟಿ-ಪಿಸಿಆರ್ ಮತ್ತು 53 ಪ್ರಕರಣಗಳು ಕ್ಷಿಪ್ರ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲ್ಲೂಕಿನಲ್ಲಿ 194 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 182 ಪ್ರಕರಣಗಳು ಆರ್.ಟಿ-ಪಿಸಿಆರ್ ಮತ್ತು 12 ಪ್ರಕರಣಗಳು ಕ್ಷಿಪ್ರ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ 272 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 246 ಆರ್.ಟಿ-ಪಿಸಿಆರ್ ಮತ್ತು 26 ಪ್ರಕರಣಗಳು ಕ್ಷಿಪ್ರ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕಿನಲ್ಲಿ 107 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 92 ಆರ್.ಟಿ-ಪಿಸಿಆರ್ ಮತ್ತು 15 ಪ್ರಕರಣ ಕ್ಷಿಪ್ರ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಕೊಡಗು ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 15,055 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 246 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 9499 ಮಂದಿ ಗುಣಮುಖರಾಗಿದ್ದಾರೆ. 5396 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಒಟ್ಟು 160 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 470 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

English summary
DC Charulata Somal said Covid-19 Cases were more frequent in Kodagu district due to delays in hospitalization of Covid patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X