ಸಮಾಧಾನಕರ ಸುದ್ದಿ; ಕೊಡಗಿನಲ್ಲಿ ಮುಕ್ಕಾಲು ಪಾಲು ಸೋಂಕಿತರು ಗುಣಮುಖ

ಕೊಡಗು, ಜುಲೈ 29: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಶರವೇಗದಲ್ಲಿ ಏರಿಕೆ ಕಾಣುತ್ತಿವೆ. ದಿನವೂ ಸಾವಿರಾರು ಪ್ರಕರಣಗಳು ದಾಖಲಾಗುತ್ತಿವೆ. ಈ ನಡುವೆ ಕೊಡಗಿನಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಿರುವುದು ಸಮಾಧಾನ ತಂದಿದೆ.

Recommended Video

      DK Shivakumar ಇಂದು ಮಂಗಳಮುಖಿಯರ ಕಷ್ಟಕ್ಕೆ ಕಿವಿ ಕೊಟ್ಟರು | Oneindia Kannada

      ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಮುಕ್ಕಾಲು ಪಾಲು ಸೋಂಕಿತರು ಗುಣಮುಖರಾಗಿರುವುದಾಗಿ ತಿಳಿದುಬಂದಿದೆ. ಆರಂಭದಲ್ಲಿ, ರಾಜ್ಯದಲ್ಲಿ ಎಲ್ಲೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬರುತ್ತಿದ್ದರೂ ಕೊಡಗಿನಲ್ಲಿ ಕೆಲವೇ ಮಂದಿಯಲ್ಲಿ ಸೋಂಕು ಇತ್ತು. ಆನಂತರ ಇದ್ದಕ್ಕಿದ್ದಂತೆ ಸೋಂಕಿನ ಪ್ರಕರಣಗಳು ಹೆಚ್ಚಾದವು.

      ಜಿಲ್ಲಾಡಳಿತ ಸೋಂಕಿನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಆದರೂ ಒಂದೂವರೆ ತಿಂಗಳಲ್ಲಿ ಒಟ್ಟು 350 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದ್ದು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿತ್ತು. ಆದರೆ ಇದೀಗ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ.

      Coronavirus Recovery Cases More In Kodagu District

      ಕೊಡಗು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 356 ಇದ್ದು, ಇವರಲ್ಲಿ 266 ಜನರು ಗುಣಮುಖರಾಗಿ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 84 ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ ಆರು ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲಾಡಳಿತದ ಮುಂಜಾಗ್ರತಾ ಕ್ರಮಗಳು ಹಾಗೂ ಜನರ ಸಹಕಾರ ಸೋಂಕು ನಿಯಂತ್ರಣಕ್ಕೆ ಬರಲು ಕಾರಣ ಎನ್ನಲಾಗಿದೆ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಿರುವುದು ಸಮಾಧಾನಕರ ಸಂಗತಿಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+