ನೆರೆ ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ
ಮಡಿಕೇರಿ, ಡಿಸೆಂಬರ್ 26; ಕೇರಳ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಗಡಿ ಭಾಗದ ಜಿಲ್ಲೆಯಾದ ಕೊಡಗಿನಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಎನ್. ವೀಣಾ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಸೇರಿದಂತೆ ಹಲವಾರು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಡಾ. ಎನ್. ವಿ. ಪ್ರಸಾದ್, "ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ" ಸಲಹೆ ನೀಡಿದರು.
ಎಚ್ಚರಿಕೆ ಕೈಗೊಳ್ಳಬೇಕು; "ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ" ಎಂದು ಡಾ. ಎನ್. ವಿ. ಪ್ರಸಾದ್ ಹೇಳಿದರು.
"ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳಬೇಕು. ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕಿದೆ" ಎಂದರು.
"ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸಿ" ಎಂದು ಡಿಎಚ್‍ಒಗೆ ಡಾ. ಪ್ರಸಾದ್ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಮಾತನಾಡಿ, "ಜಿಲ್ಲೆಯ ಗಡಿ ಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ" ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, "ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ" ಸಲಹೆ ನೀಡಿದರು.
ಕಳೆದ ವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, "ಕೋವಿಡ್ ಸಂಬಂಧಿಸಿದಂತೆ ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ, ಕೊಡಗು, ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ" ಎಂದು ಹೇಳಿದ್ದರು.
"ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಶೀತ, ನೆಗಡಿ, ಜ್ವರ ಮತ್ತಿತರ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಮಾಡಲಾಗುವುದು. ಅನಗತ್ಯ ಆತಂಕ ಬೇಡ" ಎಂದು ಸಚಿವರು ತಿಳಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದರು. "ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು" ಎಂದು ಸೂಚನೆ ನೀಡಿದ್ದರು.
"ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ" ಎಂದು ತಿಳಿಸಿದ್ದರು.
"ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು" ಎಂದು ಸಿದ್ದರಾಮಯ್ಯ ಹೇಳಿದ್ದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications