ಮಡಿಕೇರಿ; ಸೋಂಕಿತರ ಹಣ ಕಳವು, ಆಸ್ಪತ್ರೆಯ ಸಿಬ್ಬಂದಿ ಬಂಧನ

ಮಡಿಕೇರಿ, ಮೇ 28; ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟವರ ಬೆಲೆ ಬಾಳುವ ವಸ್ತುಗಳು ಇನ್ನೂ ಕೂಡ ವಾರಸುದಾರರ ಕೈ ಸೇರುತ್ತಿಲ್ಲ. ಈಗಾಗಲೇ ಓರ್ವ ಹೊರಗಿನ ಮೊಬೈಲ್‌ ಕಳ್ಳನನ್ನು ಬಂಧಿಸಿ ಮೂರು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ.

ಇದೀಗ ಮೃತರೊಬ್ಬರ ಪತ್ನಿ ತಮ್ಮ ಪತಿಯಿಂದ 11 ಸಾವಿರ ರೂಪಾಯಿ ಕಳುವಾಗಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ . ನಗದು ಕಳವು ಮಾಡಿದ್ದ ಆಸ್ಪತ್ರೆಯ ತಾತ್ಕಾಲಿಕ ಡಿ ಗ್ರೂಪ್ ಸಿಬ್ಬಂದಿ ಜೋಡುಪಾಲ ನಿವಾಸಿ ದಿಲ್‌ಶಾದ್ (45) ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದ ರಜನಿಕಾಂತ್ ಉಸಿರಾಟದ ಸಮಸ್ಯೆಯಿಂದ ಮೇ 9ರಂದು ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಡ್‌ಗಳ ಕೊರತೆ ಎದುರಾಗಿರುವುದರಿಂದ ಇಲ್ಲಿಯೂ ರೀತಿ ಏನಾದರೂ ಸಮಸ್ಯೆ ಆಗಬಹುದೆಂಬ ಅನುಮಾನದಿಂದ ಸೋಂಕಿತ ರಜನಿಕಾಂತ್‌ಗೆ ಕುಟುಂಬಸ್ಥರು 11 ಸಾವಿರ ರೂಪಾಯಿ ಹಣ ಕೊಟ್ಟು ಕಳುಹಿಸಿದ್ದರು.

Covid Patient Money Stolen Hospital Staff Arrested

ದಿನ ಕಳೆದಂತೆ ರಜನಿಕಾಂತ್ ಆರೋಗ್ಯ ಗಂಭೀರವಾಗಿದ್ದು ಐಸಿಯು ವಾರ್ಡ್‌ಗೆ ಸ್ಥಳಾಂತರ ಮಾಡಲಾಯಿತು. ಮೇ 20 ರ ಬೆಳಗ್ಗೆ 5.30ಕ್ಕೆ ರಜನಿಕಾಂತ್ ಪತ್ನಿ ಶೋಭಾಗೆ ಕರೆ ಮಾಡಿ, ಬೆಳಗೆ 4 ಗಂಟೆಗೆ ಡೈಪರ್ ಪ್ಯಾಡ್ ಬದಲಾಯಿಸಲು ಬಂದ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರು ತನ್ನ ಜೇಬಿನಲ್ಲಿದ್ದ 11 ಸಾವಿರ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದರು.

ಮೇ 23ರಂದು ರಜನಿಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಆದರೆ ರಜನಿಕಾಂತ್ ಜೇಬಿನಿಂದ ತೆಗೆಯಲಾಗಿದ್ದ ಹಣವನ್ನು ಇದುವರೆಗೂ ಯಾರೂ ಕೂಡ ಹಿಂದಿರುಗಿಸಿರಲಿಲ್ಲ . ಶೋಭಾ ಹೋಂ ಕ್ವಾರಂಟೈನ್‌ನಲ್ಲಿ ಇರುವುದರಿಂದ ಅವರ ಸಹೋದರ ಕೆ. ಗಿರೀಶ್ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು.

ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ದಿಲ್‌ಶಾದ್ ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಣ ಕಳವು ಮಾಡಿರುವ ಕುರಿತು ಒಪ್ಪಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+