ಕೋವಿಡ್ ಲಸಿಕೆ ವಿತರಣೆ; ಕಾರ್ಯಪಡೆಯ ಸಭೆ

ಮಡಿಕೇರಿ, ಡಿಸೆಂಬರ್ 11: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಮನ್ವಯ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಯಿತು.

ಶುಕ್ರವಾರ ನಡೆದ ಸಭೆಯಲ್ಲಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಗೆ ಕೋವಿಡ್-19 ಲಸಿಕೆ ಪೂರೈಕೆಯಾದ ಸಂದರ್ಭದಲ್ಲಿ ಲಸಿಕೆ ನೀಡುವ ನಿಟ್ಟಿನಲ್ಲಿ ಇದುವರೆಗಿನ ಮಾರ್ಗಸೂಚಿ ಪ್ರಕಾರ ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, "ಲಸಿಕಾ ಕಾರ್ಯಪಡೆಯ ಮೊದಲ ಸಭೆಯಲ್ಲಿ ತಿಳಿಸಿದಂತೆ ಈಗಾಗಲೇ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಪ್ರಥಮ ಹಂತದಲ್ಲಿ ಲಸಿಕೆ ನೀಡುವ ಸಂಬಂಧ ಹೆಸರು ನೋಂದಣಿ ಕಾರ್ಯ ಪೂರ್ಣಗೊಂಡಿದೆ" ಎಂದರು.

COVID Vaccine Distribution Deputy Commissioner Chaired Meeting

ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸರ್ಕಾರಿ 41 ಸಂಸ್ಥೆಗಳ 4,899 ಮತ್ತು ಖಾಸಗಿ 172 ಸಂಸ್ಥೆಗಳ 1,445 ಒಟ್ಟು 213 ಸಂಸ್ಥೆಗಳ 6,344 ಹೆಲ್ತ್ ಕೇರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು, 248 ಲಸಿಕಾ ಕೇಂದ್ರ ಮತ್ತು 261 ಲಸಿಕೆ ನೀಡುವವರನ್ನು ಗುರುತಿಸಲಾಗಿದೆ.

ಒಬ್ಬ ವ್ಯಕ್ತಿಗೆ ಎರಡು ಡೋಸ್ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರಿಗೂ, ಎರಡನೇ ಹಂತದಲ್ಲಿ ಪೊಲೀಸ್ ಇಲಾಖೆ, ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರೆ ಮುಖ್ಯವಾಹಿನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ, ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಹಾಗೂ 50 ವರ್ಷ ದೊಳಗಿನವರಿಗೆ ಕೊಮೊರ್ಬಿಡಿಟೀಸ್ ಇದ್ದಲ್ಲಿ ಲಸಿಕೆ ನೀಡಲಾಗುತ್ತದೆ.

ಲಸಿಕೆ ನೀಡುವ ಸಂದರ್ಭದಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಬೇಕಿದೆ. ಸದ್ಯದ ಮಾರ್ಗಸೂಚಿ ಪ್ರಕಾರ ಲಸಿಕಾ ಬೂತ್‍ನಲ್ಲಿ ಮೂರು ಕೊಠಡಿ ಗುರುತಿಸಬೇಕಿದೆ. ಜೊತೆಗೆ ಕೋ-ವಿನ್ (Co-Win) ತಂತ್ರಾಶದಲ್ಲಿ ಮಾಹಿತಿಯನ್ನು ದಾಖಲಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗುತ್ತಿದೆ.

ಜಿಲ್ಲಾಧಿಕಾರಿಗಳು, "ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವವರ ಜೊತೆಗೆ ದೊಡ್ಡ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವವರಿಗೂ ಸಹ ಲಸಿಕೆ ನೀಡಬೇಕು" ಎಂದರು.

ಶುಕ್ರವಾರದ ಮಾಹಿತಿಯಂತೆ ಕೊಡಗು ಜಿಲ್ಲೆಯಲ್ಲಿ 16 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 5422. ಸಕ್ರಿಯ ಪ್ರಕರಣಗಳು 73.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+