ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ, ಕಾವೇರಿ ತೀರ್ಥೋದ್ಭವ: ಮದ್ಯ ಮಾರಾಟ ಸಂಪೂರ್ಣ ನಿಷೇಧ

|
Google Oneindia Kannada News

ಮಡಿಕೇರಿ, ಅಕ್ಟೋಬರ್ 12: ಐತಿಹಾಸಿಕ ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪದಲ್ಲಿ ಅಕ್ಟೋಬರ್ 14 ಮತ್ತು 15ರಂದು ನಡೆಯಲಿರುವ ಆಯುಧ ಪೂಜೆ ಮತ್ತು ದಸರಾ ಕಾರ್ಯಕ್ರಮ ಹಾಗೂ ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಮಡಿಕೇರಿ, ಗೋಣಿಕೊಪ್ಪದಲ್ಲಿ ಈ ಬಾರಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅಕ್ಟೋಬರ್ 14ರ ಬೆಳಗ್ಗೆ 6 ಗಂಟೆಯಿಂದ 16ರ ಬೆಳಗ್ಗೆ 6 ಗಂಟೆಯವರೆಗೆ ಮಡಿಕೇರಿ ನಗರ ಠಾಣೆ ಮತ್ತು ಗೋಣಿಕೊಪ್ಪ ಠಾಣೆ ಸರಹದ್ದಿನ 10 ಕಿ.ಮೀ. ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಅಕ್ಟೋಬರ್ 17ರಂದು ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಹಿನ್ನೆಲೆ ಅಕ್ಟೋಬರ್ 16ರ ಬೆಳಗ್ಗೆ 6 ಗಂಟೆಯಿಂದ 18ರ ಬೆಳಗ್ಗೆ 6 ಗಂಟೆಯವರೆಗೆ ಭಾಗಮಂಡ ಠಾಣಾ ಸರಹದ್ದಿನ 20 ಕಿ.ಮೀ. ವ್ಯಾಪ್ತಿಯೊಳಗೆ ಬರುವ (ಚೇರಂಬಾಣೆ ಸೇರಿದಂತೆ) ಎಲ್ಲಾ ಗ್ರಾಮಗಳಲ್ಲಿರುವ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಕ್ಲಬ್, ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Madikeri Dasara And Cauvery Theerthodhbava: Prohibition On Liquor Sale From Oct 14 to 16

ತೀರ್ಥೋದ್ಭವಕ್ಕೆ ಭಕ್ತರಿಗೆ ಮುಕ್ತ ಪ್ರವೇಶ
"ತಲಕಾವೇರಿಗೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ಕುರಿತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ತೀರ್ಥೋದ್ಭವಕ್ಕೆ ಭಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ,'' ಎಂದು ಕೊಡಗು ಜಿಲ್ಲಾ ಉಸ್ತುವಾರಿ‌ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದರು.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪವಿತ್ರ ತೀರ್ಥೋದ್ಬವ ಸಂಬಂಧ ಸಚಿವರು ಮಾಹಿತಿ ನೀಡಿದ್ದಾರೆ.

"ಕಾವೇರಿ ತುಲಾ ಸಂಕ್ರಮಣ ಜಾತ್ರಾ ದಿನದಂದು ಕೋವಿಡ್- 19ನಿಂದಾಗಿ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು. ಕಾವೇರಿ ತೀರ್ಥೋದ್ಭವದ ವೇಳೆ ಪುಣ್ಯ ಸ್ನಾನಕ್ಕೆ ಅವಕಾಶವಿರುವುದಿಲ್ಲ. ಭಕ್ತರು ಬಂದು ತೀರ್ಥ ತೆಗೆದುಕೊಂಡು ಹೋಗಬಹುದು. ಭಾಗಮಂಡಲದ ತ್ರಿವೇಣಿ‌ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ," ಎಂದು ಅವರು ತಿಳಿಸಿದರು.

Madikeri Dasara And Cauvery Theerthodhbava: Prohibition On Liquor Sale From Oct 14 to 16

"ಅಕ್ಟೋಬರ್ 17ರಂದು ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 0.36 ರಷ್ಟಿದೆ. ಹೀಗಾಗಿ ತಲಕಾವೇರಿಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಕೋವಿಡ್ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ," ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

"ಭಕ್ತರಿಗೆ ಪ್ರವೇಶ ಕಲ್ಪಿಸಿ ಭಕ್ತರ ಭಾವನೆಗಳನ್ನು ಗೌರವಿಸಿದ್ದೇವೆ. ತಲಕಾವೇರಿಗೆ ಕಾಲ್ನಡಿಗೆಯಲ್ಲಿ ಭಕ್ತರು ತೆರಳಬೇಕಾಗಿಲ್ಲ. ತಲಕಾವೇರಿಗೆ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕಾಗಿಲ್ಲ. ಆದರೆ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ‌ ಅಂತರ ಪಾಲಿಸುವುದು ಕಡ್ಡಾಯವಾಗಿದೆ," ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ
"ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ವೈದ್ಯರು, ಶುಶ್ರೂಷಕರು, ಆಂಬ್ಯುಲೆನ್ಸ್ ಹೀಗೆ ಅಗತ್ಯ ತಂಡವನ್ನು ನಿಯೋಜಿಸಬೇಕು. ಭಾಗಮಂಡಲ ಗ್ರಾ.ಪಂ. ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸ್ವಚ್ಛತೆಗೆ ಒತ್ತು ನೀಡುವುದು, ಕುಡಿಯುವ ನೀರು ಪೂರೈಕೆ, ಶೌಚಾಲಯ, ವಾಹನ ನಿಲುಗಡೆ ನಿರ್ವಹಣೆಗೆ ವ್ಯವಸ್ಥೆ ಮಾಡುವಂತೆ," ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

ನೀರಾವರಿ ಇಲಾಖೆ ವ್ಯಾಪ್ತಿಯ ಭಾಗಮಂಡಲ ರಸ್ತೆ ಸರಿಪಡಿಸುವುದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡುವುದು, ಕೋವಿಡ್-19 ಹಿನ್ನೆಲೆ ಸರ್ಕಾರದ ನಿಯಮಗಳನ್ನು ಪಾಲಿಸುವುದು ಹಾಗೂ ತುಲಾ ಸಂಕ್ರಮಣ ದಿನದಂದು ಅಗತ್ಯ ಬಸ್‌ಗಳ ನಿಯೋಜನೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

English summary
Madikeri Dasara and Cauvery Theerthodhbava: Kodagu DC ordered to prohibition on sale of liquor in Madikeri town and Gonikoppa police station 10 km around from October 14 to October 16. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X