ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಂಗಪಟ್ಟಣ ದಸರಾ ಲಾಂಛನ ಬಿಡುಗಡೆ

By ಬಿ.ಎಂ. ಲವಕುಮಾರ್
|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 19: ಅತ್ತ ನಾಡಹಬ್ಬ ಮೈಸೂರು ದಸರಾಗೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ದಸರಾ ಹುಟ್ಟಿಗೆ ಕಾರಣವಾದ ಶ್ರೀರಂಗಪಟ್ಟಣದಲ್ಲೂ ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.

ಇಲ್ಲಿ ಸೆ. 24 ರಿಂದ 26 ರವರೆಗೆ ಮೂರು ದಿನಗಳ ದಸರಾ ಆಚರಣೆ ನಡೆಯಲಿದ್ದು, ಈ ಸಂಬಂಧ ದಸರಾ ಲಾಂಛನವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಬಿಡುಗಡೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಅವರು, ಸೆ.24 ರಂದು ಜಂಬುಸವಾರಿ ಮೂಲಕ ದಸರಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲು ಹಿರಿಯ ಸಾಹಿತಿ ಡಾ.ಕೆ.ಮರಳುಸಿದ್ದಪ್ಪ ಅವರು ಆಗಮಿಸುವರು. 26 ರಂದು ನಡೆಯುವ ಸಮರೋಪ ಸಮಾರಂಭಕ್ಕೆ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

Dasara preparations in Srirangapattana

ಕಾರ್ಯಕ್ರಮಕ್ಕೆ ಮೆರಗು ನೀಡಲು ಸೆ.24ರಿಂದ 26ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳ ದಸರಾ, ಕ್ರೀಡಾ ದಸರಾ, ಮಹಿಳಾ ದಸರಾ ಹಾಗೂ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಜನರನ್ನು ಆಕರ್ಷಿಸಲು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಸ್ಥಳೀಯ ಕಲಾವಿದರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ, ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವ ಕಾರ್ಯಕ್ರಮಕ್ಕಾಗಿ ಸರ್ಕಾರದಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿದ್ದು, ಇನ್ನೂ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ಇದೇ ಸಂದರ್ಭ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯ್, ಪಾಂಡವಪುರ ಉಪ ವಿಭಾಗಧಿಕಾರಿ ಯಶೋಧಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

English summary
In Srirangapattana preparations of Dasara festival has been taking momentum. The district administration has released the logo for this Dasara celebrations. Dasara celebrations will start on September 24th and ends on September 26th, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X