ಹೊರ ಜಿಲ್ಲೆಗೆ ರಸಗೊಬ್ಬರ ಸಾಗಾಣಿಕೆಗೆ ನಿರ್ಬಂಧ

ಮಡಿಕೇರಿ, ಮಾರ್ಚ್‌ 18: ಕೊಡಗು ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ ಸಮರ್ಪಕವಾಗಿ ಸರಬರಾಜು ಆಗಬೇಕು. ಕೃಷಿಕರಿಂದ ಯಾವುದೇ ರೀತಿ ದೂರು ಬರದಂತೆ ರಸಗೊಬ್ಬರ ಮಾರಾಟಗಾರರು, ಕಂಪನಿಗಳು, ಸಹಕಾರ ಸಂಘಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ಹೊರ ಜಿಲ್ಲೆಗಳಿಗೆ ರಸಗೊಬ್ಬರ ಸಾಗಣೆ ಮೇಲೆಯೂ ಕಣ್ಗಾವಲು ವಹಿಸುವಂತೆ ಸೂಚನೆ ಕೊಟ್ಟಿದ್ದಾರೆ.

ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ದಾಸ್ತಾನು ಸಂಬಂಧ ಜಿಲ್ಲಾಧಿಕಾರಿಗಳು ಜಿಲ್ಲೆಯ ರಸಗೊಬ್ಬರ ಕಂಪನಿ ಪ್ರತಿನಿಧಿಗಳು, ಸಹಕಾರ ಸಂಘಗಳು, ಕೃಷಿ ಪರಿಕರ ಮಾರಾಟ ಸಹಕಾರ ಸಂಘ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಿದರು.

DC Asked To Keep Eye On Inter District Fertilizer Transportation

ಸಭೆಯಲ್ಲಿ ಜಿಲ್ಲೆಗೆ ಪೂರೈಕೆಯಾಗುವ ರಸಗೊಬ್ಬರ ದಾಸ್ತಾನು ಮಾಡುವುದರ ಜೊತೆಗೆ, ಹೊರ ಜಿಲ್ಲೆಗೆ ರಸಗೊಬ್ಬರ ಸಾಗಾಣಿಕೆ ಮಾಡದಂತೆ ಚೆಕ್‍ಪೋಸ್ಟ್‌ಗಳಲ್ಲಿ ಅಗತ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆಯನ್ನು ನೀಡಲಾಗಿದೆ.

ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಭೆಯಲ್ಲಿ ಮಾತನಾಡಿ, "ಮಾರುಕಟ್ಟೆ ಫೆಡರೇಷನ್ ಮತ್ತು ಬೀಜ ನಿಗಮದಿಂದ ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ದಾಸ್ತಾನು ಮಾಡಿಕೊಳ್ಳುವುದು. ಪ್ರಮುಖವಾಗಿ ಯೂರಿಯಾ ಮತ್ತು ಡಿಐಪಿ ರಸಗೊಬ್ಬರವನ್ನು ಬೇಡಿಕೆಯಂತೆ ದಾಸ್ತಾನು ಮಾಡಿಕೊಳ್ಳಬೇಕು. ಪ್ರತಿ ತಿಂಗಳು ಪೂರೈಕೆಯಾಗುವ ರಸಗೊಬ್ಬರ ಸಂಬಂಧ ಕಾಲ ಕಾಲಕ್ಕೆ ರಸಗೊಬ್ಬರ ಮಾರಾಟಗಾರರು ಹಾಗೂ ಕಂಪನಿ ಮತ್ತು ಸಹಕಾರ ಸೊಸೈಟಿಯವರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡಬೇಕು" ಎಂದರು.

"ಎಲ್ಲಾ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಪಿಒಎಸ್ ಯಂತ್ರದಲ್ಲಿನ ದಾಸ್ತಾನು ಹಾಗೂ ವಾಸ್ತವಿಕ ಭೌತಿಕ ದಾಸ್ತಾನನ್ನು ತಾಳೆ ಇರುವಂತೆ ನೋಡಿಕೊಳ್ಳಬೇಕು. ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ತಾಂತ್ರಿಕ ದೋಷಪೂರಿತ ಪಿಒಎಸ್ ಯಂತ್ರಗಳನ್ನು ಸಂಬಂಧಪಟ್ಟವರಿಂದ ನವೀಕರಿಸಿಕೊಳ್ಳುವುದು ಹಾಗೂ ಪ್ರತಿದಿನದ ಮಾರಾಟಕ್ಕೆ ಅನುಗುಣವಾಗಿ ಪಿಒಎಸ್ ಯಂತ್ರದಲ್ಲಿಯೂ ಸಹ ದಾಸ್ತಾನನ್ನು ತಿರುವಳಿಗೊಳಿಸಿ ವಾಸ್ತವಿಕ ಭೌತಿಕ ದಾಸ್ತಾನು ಹಾಗೂ ಪಿಒಎಸ್ ಯಂತ್ರದ ದಾಸ್ತಾನು ತಾಳೆ ಇರುವಂತೆ ನಿರ್ವಹಿಸಬೇಕು" ಎಂದು ಸೂಚಿಸಿದರು.

"ರೈತರಿಗೆ ಯಾವುದೇ ರೀತಿಯ ಕಳಪೆ ರಸಗೊಬ್ಬರ ಸರಬರಾಜು ಆಗದಂತೆ ಎಲ್ಲಾ ರಸಗೊಬ್ಬರ ತಯಾರಿಕ ಸಂಸ್ಥೆ ಹಾಗೂ ಎಲ್ಲಾ ಖಾಸಗಿ ಮತ್ತು ಸಹಕಾರ ಸಂಘಗಳು ಎಚ್ಚರ ವಹಿಸಬೇಕು. ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿರುವ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯುವ ಸಂಬಂಧ ಜಿಲ್ಲೆಯ ಗಡಿ ಭಾಗಗಳ ಚೆಕ್ ಪೋಸ್ಟ್‌ಗಳಲ್ಲಿ ಸೂಕ್ತ ತಪಾಸಣೆ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು" ಎಂದು ಡಿಸಿ ನಿರ್ದೇಶನ ಕೊಟ್ಟರು.

ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿರುವ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿರುವುದನ್ನು ತಡೆಯಲು ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರು(ಜಾರಿದಳ) ಮತ್ತು ಎಲ್ಲಾ ರಸಗೊಬ್ಬರ ಪರಿವೀಕ್ಷಕರುಗಳಿಗೆ ಕಾಲಕಾಲಕ್ಕೆ ಪರಿಶೀಲನೆ ಮಾಡುವಂತೆ ಹಾಗೂ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ರಸಗೊಬ್ಬರ ನಿಯಂತ್ರಣ ಆದೇಶ 1985 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955 ಪ್ರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.

ಕಳೆದ ವರ್ಷದ ಮುಂಗಾರು ಸಂದರ್ಭದ ಬೇಡಿಕೆ ಪರಿಗಣಿಸಿ ಪ್ರಸಕ್ತ ಸಾಲಿನಲ್ಲಿ ವಿವಿಧ ರಸಗೊಬ್ಬರ ದಾಸ್ತಾನು ಮಾಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು ಲಭ್ಯತೆ 1,31,502 ಮೆಟ್ರಿಕ್ ಟನ್ ಆಗಿದ್ದು, 1,04,396 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆಯಾಗಿದ್ದು, 27,106 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಉಳಿಕೆಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+