ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ: ಜಿಲ್ಲಾಧಿಕಾರಿ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 27: ಕೊಡಗು ಜಿಲ್ಲೆಯಲ್ಲಿ ಸೋಮವಾರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ 40 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲಿ 23 ಪ್ರಕರಣಗಳು ಮತ್ತು ವಿರಾಜಪೇಟೆ ತಾಲೂಕಿನಲ್ಲಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 4 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

 ಅಮೆರಿಕದ ಲಸಿಕೆ ಪ್ರಯೋಗ ಮತ್ತೆ ಶುರು, ಜನವರಿಗೆ ಲಭ್ಯ! ಅಮೆರಿಕದ ಲಸಿಕೆ ಪ್ರಯೋಗ ಮತ್ತೆ ಶುರು, ಜನವರಿಗೆ ಲಭ್ಯ!

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4773 ಆಗಿದ್ದು, 4428 ಮಂದಿ ಗುಣಮುಖರಾಗಿದ್ದಾರೆ. 279 ಸಕ್ರಿಯ ಪ್ರಕರಣಗಳಿದ್ದು, 66 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 254 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Decreased of Coronavirus Infected Numbers In Kodagu District

ಕೊಡಗಿನಲ್ಲಿ ಅ.1 ರಂದು ಶೇ.12.1 ಅ.25 ರಂದು ಶೇ.6.1 ಸೋಂಕಿತರು ಪತ್ತೆಯಾಗಿದ್ದಾರೆ. ಮರಣ ಪ್ರಮಾಣ ಅ.1 ರಂದು ಶೇ.1.06. ಅ.25 ರಂದು ಶೇ.1.01 ರಷ್ಟಾಗಿದ್ದು, ರಾಜ್ಯದಲ್ಲಿ ಕೊಡಗು 9 ನೇ ಸ್ಥಾನದಲ್ಲಿದೆ. ಕೊಡಗಿನಲ್ಲಿ ಅ.1 ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 486, ಅ.25 ರಂದು 239, ಕೊಡಗು ಜಿಲ್ಲೆಯಲ್ಲಿ ಗುಣಮುಖ ಪ್ರಮಾಣ ಶೇ.93.55 ಆಗಿದೆ.

ಈ ಮೊದಲು ಕೊಡಗು ಜಿಲ್ಲೆಯಲ್ಲಿ ನಡೆಸುತ್ತಿದ್ದ ಗಂಟಲು ಮೂಗು ದ್ರವ ಮಾದರಿ ಪರೀಕ್ಷೆಗಳ ಗುರಿಯನ್ನು ಸುಮಾರು ಎರಡು ಪಟ್ಟು ಹೆಚ್ಚಿಸಲಾಗಿದೆ. ಕಾಂಟಾಕ್ಟ್ ಟ್ರೇಸಿಂಗ್ ಸಲುವಾಗಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ಮುಖಾಂತರ ಸೋಂಕಿತ ವ್ಯಕ್ತಿಯ ಪ್ರಾಥಮಿಕ, ದ್ವಿತೀಯ ಸಂಪರ್ಕಗಳನ್ನು ತೀವ್ರ ರೀತಿಯಲ್ಲಿ ಮತ್ತು ಪರಿಣಾಮಕಾರಿಯಾಗಿ ಗುರುತಿಸಲಾಗುತ್ತಿದೆ.

Recommended Video

ಕಾಂಗ್ರೆಸ್ ನಲ್ಲಿ ಗೊಂದಲ ! | DK Shivkumar | RR Nagar By Election | Oneindia Kannada

ಕೊರೊನಾ ಸೋಂಕು ಪ್ರಕರಣ ಹೆಚ್ಚಾಗದಂತೆ ತಡೆಗಟ್ಟುವಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಾಗಿದೆ. ಕೋವಿಡ್ ಸೋಂಕು ಲಕ್ಷಣ ಕಂಡುಬಂದಲ್ಲಿ ವಿಳಂಬ ರಹಿತವಾಗಿ ವೈದ್ಯರನ್ನು ಸಂಪರ್ಕಿಸಿ ನಿರ್ಲಕ್ಷ್ಯತನ ತೋರದಿರಿ. ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಜಿಲ್ಲೆಯ ಜನತೆ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.

English summary
40 new Covid-19 cases were confirmed by RT-PCR examination on Monday in Kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X