• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಡಗು ಪೊಲೀಸರಿಗೆ ಶಹಬ್ಬಾಸ್ ಎಂದ ಡಿಜಿಪಿ ಪ್ರವೀಣ್ ಸೂದ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 3: ಕರ್ನಾಟಕದಲ್ಲಿ ಮಾದಕ ದ್ರವ್ಯ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕಿನಿಂದ ಸಾಗಿದ್ದು ನಟ ನಟಿಯರು ಸೇರಿದಂತೆ ಡ್ರಗ್ ಜಾಲದಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಖಂಡಿತವಾಗಿ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಕೋಲಾರ, ರಾಯಚೂರುಗಳಲ್ಲಿಯೂ ಬೆಂಗಳೂರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಿದ್ದಾರೆ. ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಡ್ರಗ್ ದಂಧೆಕೋರರ ಸದೆಬಡೆಯುವಿಕೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದರಲ್ಲದೇ ಕೊಡಗು ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಮಾದಕ ದ್ರವ್ಯ ಬಳಸಲಾದ ಪಾರ್ಟಿಗಳು ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

 ಡ್ರಗ್ ಮಾಫಿಯಾ; ಹೋಂ ಸ್ಟೇಗಳಿಗೆ ಪ್ರವೀಣ್ ಸೂದ್ ವಾರ್ನಿಂಗ್ ಡ್ರಗ್ ಮಾಫಿಯಾ; ಹೋಂ ಸ್ಟೇಗಳಿಗೆ ಪ್ರವೀಣ್ ಸೂದ್ ವಾರ್ನಿಂಗ್

ರಾಜ್ಯ ಪೊಲೀಸ್ ಇಲಾಖೆಯಲ್ಲಿನ 1,500 ಪೊಲೀಸರಿಗೆ ಈವರೆಗೂ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ 73 ಮಂದಿ ಸಾವಿಗೀಡಾಗಿದ್ದಾರೆ ಎಂದು ಪ್ರವೀಣ್ ಸೂದ್ ಮಾಹಿತಿ ನೀಡಿದರು. ಕೊರೊನಾ ಸೋಂಕಿತ ಪೊಲೀಸರಿಗೆ ಮಾನಸಿಕ ಸ್ಥೈರ್ಯ ನೀಡಲು ರಾಜ್ಯವ್ಯಾಪಿ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದರು.

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಪೊಲೀಸರು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಉತ್ತಮ ರೀತಿ ಕಾರ್ಯನಿರ್ವಹಿಸಿದ್ದಾರೆ. ಕೊರೊನಾ ನಿಯಂತ್ರಣದಲ್ಲೂ ಕೊಡಗು ಪೊಲೀಸರ ಕಾರ್ಯನಿರ್ವಹಣೆ ಗಮನಾರ್ಹ ಎಂದೂ ಶ್ಲಾಘಿಸಿದರು. ಕೊಡಗು ಜಿಲ್ಲೆಯ ಪೊಲೀಸರ ವಸತಿ ಮತ್ತು ವಾಹನ ದುರಸ್ತಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

   World Longest Tunnel inaugurated | Atal Tunnel | Oneindia Kannada

   ಸುದ್ದಿಗೋಷ್ಠಿಯಲ್ಲಿ ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕ್ಷಮಾಮಿಶ್ರ ಉಪಸ್ಥಿತರಿದ್ದರು.

   English summary
   In Kodagu district, police have worked well with the district administration in managing natural disasters and also controlling corona, appreciated DGP Praveen Sood,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X