ಕೊಡಗು-ಹಾಸನ ನಡುವೆ ಸಂಚರಿಸುವವರಿಗೆ ಸೂಚನೆಗಳು

ಕೊಡಗು, ಮೇ 05 : ಕೊಡಗು ಜಿಲ್ಲೆಯಿಂದ ಒಂದು ಬಾರಿಯ ಅನುಮತಿ ಪಾಸು ಪಡೆದು ಹಾಸನ ಜಿಲ್ಲೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಹಲವು ಸೂಚನೆ ನೀಡಲಾಗದೆ. ಹಾಸನ ಮತ್ತು ಕೊಡಗು ಎರಡೂ ಜಿಲ್ಲೆಗಳು ಹಸಿರು ವಲಯದಲ್ಲಿವೆ.

ಕೊಡಗು ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಪ್ರಯಾಣಿಸುವವರು ಸಿದ್ಧಾಪುರ (ಶಿರಂಗಾಲ) ಚೆಕ್ ಪೋಸ್ಟ್ ಮೂಲಕ ಮಾತ್ರ ಸಂಚಾರ ನಡೆಸಬೇಕು ಎಂದು ಹಾಸನ ಜಿಲ್ಲಾಡಳಿತ ಹೇಳಿದೆ. ಉಳಿದ ಚೆಕ್‌ ಪೋಸ್ಟ್‌ಗಳಲ್ಲಿ ಪ್ರವೇಶಕ್ಕೆ ಅನುಮತಿ ನೀಡಿಲ್ಲ.

ಕೊಡಗು ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸ್ವಂತ ವಾಹನದ ಮೂಲಕ ಪ್ರಯಾಣಿಸುವವರಿಗೆ ಸಿದ್ಧಾಪುರ (ಶಿರಂಗಾಲ) ಚೆಕ್ ಪೋಸ್ಟ್ ನ್ನು ಹೊರತುಪಡಿಸಿ ಜಿಲ್ಲೆಗೆ ಪ್ರವೇಶಿಸುವ ಉಳಿದ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಹಾಸನ ಜಿಲ್ಲಾಡಳಿತ ಬಂದ್ ಮಾಡಿದೆ.

Directions For People To Travel Kodagu And Hassan

ಪ್ರಯಾಣಿಕರು ಸಂಚಾರ ನಡೆಸುವಾಗ ಯೋಜನೆ ರೂಪಿಸಿಕೊಂಡು ಬರಬೇಕು ಎಂದು ಮನವಿ ಮಾಡಲಾಗಿದೆ. ಉಳಿದಂತೆ ಎಲ್ಲಾ ರೀತಿಯ ಸರಕು ಸಾಗಾಟ ವಾಹನಗಳಿಗೆ, ಕೃಷಿ ಚಟುವಟಿಕೆಗಳಿಗೆ ಮತ್ತು ತುರ್ತು ಸೇವೆಗಳಿಗೆ ಕೊಡಗು ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಚೆಕ್ ಪೋಸ್ಟ್ ತೆರೆದಿರುತ್ತದೆ.

ಹಾಸನ ಜಿಲ್ಲಾಧಿಕಾರಿಗಳು ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಹೊರ ಜಿಲ್ಲೆ/ರಾಜ್ಯದಿಂದ ಬರುವ ಜನರ ಆರೋಗ್ಯ ತಪಾಸಣೆ, ದಾಖಲಾತಿ ಪರಿಶೀಲನೆ ಮತ್ತು ಅವರ ಅಂಕಿ-ಅಂಶಗಳನ್ನು ಸಮರ್ಪಕವಾಗಿ ಸಂಗ್ರಹಿಸುವ ಬಗ್ಗೆ ಪರಿಶೀಲನೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ 5-5-2020 ರಿಂದ 18-5-2020 ರವರೆಗೆ ಅನ್ವಯಿಸುವಂತೆ ಲಾಕ್ ಡೌನ್‌ನಿಂದ ಷರತ್ತುಬದ್ಧ ವಿನಾಯಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+