ಗಣಪತಿ ಸಾವಿನ ಪ್ರಕರಣ: ಜಾರ್ಜ್ ಅವರಿಗೆ ಸಿಬಿಐನಿಂದ ಸಮನ್ಸ್
ಬೆಂಗಳೂರು/ ಮಡಿಕೇರಿ, ಸೆ. 22: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಎಂ.ಕೆ ಗಣಪತಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸಿಬಿಐ ಸಮನ್ಸ್ ಜಾರಿಗೊಳಿಸಿದೆ.
ವಿಧಾನಸೌಧಕ್ಕೆ ಆಗಮಿಸಿ ಸಿಬಿಐ ಅಧಿಕಾರಿಗಳಿಂದ ಖುದ್ದಾಗಿ ಜಾರ್ಜ್ ಅವರಿಗೆ ಸಮನ್ಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಆದೇಶದಂತೆ ಸಿಬಿಐ ಮತ್ತೆ ತನಿಖೆ ಆರಂಭಿಸಿದ್ದು, ವಿಚಾರಣೆಗಾಗಿ ಕೆ.ಜೆ ಜಾರ್ಜ್ ಸೇರಿದಂತೆ ಇತರೆ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಸಿಬಿಐ ತಂಡವು ಅಂತಿಮ ತನಿಖಾ ವರದಿಯನ್ನು ಕೋರ್ಟಿಗೆ ಸಲ್ಲಿಸಿತ್ತು. ಹಿಂದೆ ಅಂದಿನ ಗೃಹ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ತಂಡ ಈಗ ವಿಸ್ತೃತವಾಗಿ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.
ಗಣಪತಿ ಅವರ ಆತ್ಮಹತ್ಯೆಗೆ ಯಾವುದೇ ಪ್ರಚೋದನೆ ಇರಲಿಲ್ಲ ಎಂದು ಸಿಬಿಐ ತಂಡ ಬಿ ರಿಪೋರ್ಟ್ ನಲ್ಲಿ ನೀಡಿದ್ದಕ್ಕೆ ಪುತ್ರ ನಿಹಾಲ್ ಆಕ್ಷೇಪ ವ್ಯಕ್ತಪಡಿಸಿ, ತನ್ನ ತಂದೆ ಆತ್ಮಹತ್ಯೆಗೆ ಕೆಲವರ ಪ್ರಚೋದನೆ ಇದೆ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಂಗ ಆಯೋಗದ ವರದಿ ಯಾವುದೇ ಬೆಲೆ ಸಿಕ್ಕಿರಲಿಲ್ಲ
2017ರ ಅಕ್ಟೋಬರ್ ನಲ್ಲಿ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ನಂತರ ತನಿಖೆಗೆ ಕಾಲಾವಕಾಶ ಕೋರಿತ್ತು. ಹೀಗಾಗಿ, ನ್ಯಾಯಾಂಗ ಆಯೋಗದ ವರದಿ ಯಾವುದೇ ಬೆಲೆ ಸಿಕ್ಕಿರಲಿಲ್ಲ. ನಂತರ ಮಡಿಕೇರಿ ಜೆಎಂಎಫ್ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ 260 ಪುಟಗಳ ವರದಿಯನ್ನು ಸಿ.ಬಿ.ಐ ಅಧಿಕಾರಿಗಳು ಸಲ್ಲಿಸಿದ್ದರು.
ಸರ್ಕಾರ ನೇಮಿಸಿದ್ದ ನ್ಯಾಯಾಂಗ ಆಯೋಗವು ತನ್ನ ವರದಿಯನ್ನು ಸಲ್ಲಿಸಿ ಎರಡು ವರ್ಷ ವಾಗಿದೆ. ಸಿಐಡಿ ವರದಿಯಂತೆ ಈ ವರದಿ ಪ್ರಕಾರವು ಎಂಕೆ ಗಣಪತಿ ಸಾವಿಗೆ ಮಾನಸಿಕ ಒತ್ತಡವೇ ಕಾರಣ ಎಂದು ಷರಾ ಹಾಕಲಾಗಿತ್ತು.

ನ್ಯಾಯಾಂಗ ವರದಿಯಲ್ಲಿ ಏನಿತ್ತು?
ನಿವೃತ್ತ ನ್ಯಾಯಾಧೀಶ ಕೆ.ಎನ್ ಕೇಶವನಾರಾಯಣ ಅವರ ನೇತೃತ್ವದ ನ್ಯಾಯಾಂಗ ಆಯೋಗವು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ತನ್ನ ವರದಿಯನ್ನು ಸಲ್ಲಿಸಿತ್ತು. ಸುಮಾರು ಒಂದೂವರೆ ವರ್ಷಗಳ ತನಿಖೆ, ವಿಚಾರಣೆ ಬಳಿಕ ತನ್ನ ವರದಿಯನ್ನು ಸಲ್ಲಿಸಿತ್ತು. ಸದ್ಯ ವರದಿಯನ್ನು ಪರಿಶೀಲಿಸಲು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ ಅವರಿಗೆ ಹಸ್ತಾಂತರಿಸಲಾಗಿತ್ತು.
50 ಸಾಕ್ಷ್ಯಗಳ ವಿಚಾರಣೆ ನಡೆಸಿ, ಸತ್ಯ ಶೋಧನಾ ಸಮಿತಿ ಮಾದರಿಯ ವರದಿಯನ್ನು ತಯಾರಿಸಿ, 320 ಪುಟಗಳ ವರದಿ ಇದಾಗಿತ್ತು. ಎಂಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಕಂಡು ಬಂದಿಲ್ಲ. ಮಾನಸಿಕ ಒತ್ತಡವೇ ಗಣಪತಿ ಅವರ ಆತ್ಮಹತ್ಯೆಗೆ ಕಾರಣ ಎಂದು ನ್ಯಾಯಾಂಗ ವರದಿಯಲ್ಲಿ ಹೇಳಲಾಗಿತ್ತು

ಪ್ರಮುಖ ಆರೋಪಿಗಳು ಯಾರು?
ಕೊಡಗಿನ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಮಂಗಳೂರಿನ ಡಿವೈಎಸ್ಪಿಯಾಗಿದ್ದ ಎಂ.ಕೆ ಗಣಪತಿ ಅವರು ಜುಲೈ 7, 2016ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಅವರು ಮಂಗಳೂರಿನಲ್ಲಿ ಡಿವೈಎಸ್ಪಿಯಾಗಿದ್ದರು. ಸಾಯುವುದಕ್ಕೂ ಮೊದಲು ನೀಡಿದ್ದ ಸಂದರ್ಶನದಲ್ಲಿ ಗಣಪತಿ ತಮ್ಮ ಸಾವಿಗೆ ಕೆ.ಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ ಪ್ರಸಾದ್ ಕಾರಣ ಎಂದು ಹೇಳಿದ್ದರು.
ಆದರೆ, ಪ್ರಮುಖ ಆರೋಪಿಗಳಾದ ಅಂದಿನ ಗೃಹ ಸಚಿವ ಕೆಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್, ಪ್ರಣವ್ ಮೊಹಾಂತಿ ಅವರನ್ನು ನ್ಯಾಯಾಂಗ ಆಯೋಗ ವಿಚಾರಣೆಗೊಳಪಡಿಸಿರಲಿಲ್ಲ.
Recommended Video

ಜನಪ್ರತಿನಿಧಿಗಳ ಕೋರ್ಟಿನಲ್ಲಿ ಕೇಸ್
ವಿಡಿಯೋ ಸಾಕ್ಷ್ಯದ ಮೇಲೆ ಆರಂಭವಾದ ಪೊಲೀಸರ ತನಿಖೆ 'ಅಸಹಜ ಸಾವು' ಎಂದಷ್ಟೇ ಪ್ರಕರಣದ ತನಿಖೆ ನಡೆದು ನಂತರ ಸಿಐಡಿ ಪಾಲಾಯಿತು. ಸಿಐಡಿ ತನಿಖೆ ನಡೆಸಿ, ಕೆಜೆ ಜಾರ್ಜ್ ಸೇರಿದಂತೆ ಮೂವರಿಗೂ ಕ್ಲೀನ್ ಚಿಟ್ ನೀಡಿ, ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿತು. ರಾಜೀನಾಮೆ ನೀಡಿದ್ದ ಜಾರ್ಜ್ ಮತ್ತೆ ಸಂಪುಟ ಸೇರಿದರು. ಗಣಪತಿ ಕುಟುಂಬದವರ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್, ಪ್ರಕರಣವನ್ನು ಸಿಬಿಐಗೆ ವಹಿಸಿತು, ತನಿಖೆ ನಿಧಾನಗತಿಯಿಂದ ಸಾಗಿ, ಈಗ ಚಾರ್ಜ್ ಶೀಟ್ ಸಲ್ಲಿಕೆ ಹಂತಕ್ಕೆ ಬಂದಿದೆ. ಸಿಬಿಐ ಡಿವೈಎಸ್ಪಿ ರವಿ, ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಸುಬೋಧ್ ಅವರು ತನಿಖಾ ವರದಿ ಸಲ್ಲಿಸಿದ್ದಾರೆ. ಜಾರ್ಜ್ ವಿರುದ್ಧದ ಪ್ರಕರಣ ಜನಪ್ರತಿನಿಧಿಗಳ ಕೋರ್ಟಿನಲ್ಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications