ಕೊಡಗಿನಲ್ಲಿ ನಡುಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಅಧಿಕಾರಿಗಳು
ಮಡಿಕೇರಿ, ಏಪ್ರಿಲ್ 16: ಅಕ್ರಮ ಮದ್ಯ ಮಾರಾಟ ಪರಿಶೀಲನೆಗೆ ಬಂದಿದ್ದ ಅಬಕಾರಿ ಅಧಿಕಾರಿಗಳು ಅಶ್ಲೀಲ ಪದಗಳಿಂದ ಒಬ್ಬರನ್ನೊಬ್ಬರು ನಿಂದಿಸಿಕೊಂಡು ನಡು ಬೀದಿಯಲ್ಲೇ ಬಡಿದಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.
Recommended Video
ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುವೆ ಜಗಳ ಉಂಟಾಗಿದ್ದು, ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಶಿವಪ್ಪ ಮೇಲೆ ನಟರಾಜ್ ಹಾಗೂ ನಟರಾಜ್ ಕಾರು ಚಾಲಕ ಮನೋಹರ್ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಲಾಕ್ ಡೌನ್ ಇರುವುದರಿಂದ ಎಲ್ಲೆಡೆ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಆದರೆ ಗ್ರಾಮೀಣ ಭಾಗದಲ್ಲಿ ಜನರು ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ದರಿಂದ ಉಪ ಅಧೀಕ್ಷಕ ಶಿವಪ್ಪ ಮತ್ತು ತಂಡ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರಕ್ಕೆ ಪರಿಶೀಲನೆಗೆ ಹೋಗಿತ್ತು.

ಈ ಸಂದರ್ಭ ಸ್ಥಳಕ್ಕೆ ಬಂದ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಇವರಿಬ್ಬರ ಜಗಳ ತಾರಕಕ್ಕೇರಿದೆ. ರಸ್ತೆಯಲ್ಲೇ ಅವಾಚ್ಯ ಪದಗಳಿಂದ ನಿಂದಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ.












Click it and Unblock the Notifications