ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ

|
Google Oneindia Kannada News

ಮಡಿಕೇರಿ, ಜನವರಿ 16; ಮಡಿಕೇರಿಯಲ್ಲಿ ಫೆಬ್ರವರಿ 3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ ಆಯೋಜನೆ ಮಾಡಲಾಗಿದೆ. ರಾಜಸೀಟಿನಲ್ಲಿ ಈ ಪ್ರದರ್ಶನ ನಡೆಯಲಿದೆ.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರಾಜಾಸೀಟ್ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ತಿಳಿಸಿದ್ದಾರೆ.

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಅಂಜೂರ ಹಣ್ಣಿನಿಂದ ವೈನ್ ತಯಾರಿಕೆ, ರೈತರಿಗೋಸ್ಕರ ಹೊಸ ತಂತ್ರಜ್ಞಾನರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಅಂಜೂರ ಹಣ್ಣಿನಿಂದ ವೈನ್ ತಯಾರಿಕೆ, ರೈತರಿಗೋಸ್ಕರ ಹೊಸ ತಂತ್ರಜ್ಞಾನ

ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಗಿಡಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ನಾಟಿ ಮಾಡಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ.

ಆನ್ಲೈನ್ ಮದ್ಯ ಮಾರಾಟಕ್ಕೆ ವೈನ್ ಮರ್ಚಂಟ್ಸ್ ವಿರೋಧ ಆನ್ಲೈನ್ ಮದ್ಯ ಮಾರಾಟಕ್ಕೆ ವೈನ್ ಮರ್ಚಂಟ್ಸ್ ವಿರೋಧ

Flower Show And Wine Utsav At Madikeri February 3 To 6

ಮುಖ್ಯ ಆರ್ಕಷಣೆಯಾಗಿ ವಿವಿಧ ಹೂಗಳಿಂದ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕೆ ಇಡಲಾಗುತ್ತದೆ. ಅಲಂಕಾರಿಕ ವಿವಿಧ ಹೂ ಕುಂಡಗಳ ಪ್ರದರ್ಶನ, ಬೋನ್ ಸಾಯ್ ಪ್ರದರ್ಶನ, ತರಕಾರಿ ಕೆತ್ತನೆ ಪ್ರದರ್ಶಿಸಲಾಗುತ್ತದೆ.

ಪ್ರಧಾನಿ ಮೋದಿ ಊರಿನ ರೈತರಿಗೆ ಪುತ್ತೂರಿನ ಯುವಕನಿಂದ ಜೇನು ತರಬೇತಿ ಪ್ರಧಾನಿ ಮೋದಿ ಊರಿನ ರೈತರಿಗೆ ಪುತ್ತೂರಿನ ಯುವಕನಿಂದ ಜೇನು ತರಬೇತಿ

ವೈನ್ ಉತ್ಸವ; ಫಲಪುಷ್ಪ ಪ್ರದರ್ಶನ ಜೊತೆಗೆ ವೈನ್ ಉತ್ಸವ ಆಯೋಜಿಸಲಾಗಿದೆ. ವೈನ್ ಉತ್ಸವದಲ್ಲಿ ವಿವಿಧ ಹಣ್ಣುಗಳಿಂದ ತಯಾರಿಸಿದ ವೈನ್ ಜ್ಯೂಸ್‍ಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗುತ್ತದೆ.

ವೈನ್ ಉತ್ಸವದಲ್ಲಿ ಭಾಗವಹಿಸುವವರು ಸ್ವಂತ ಉತ್ಪಾದನಾ ಘಟಕ ಹೊಂದಿದ್ದು, ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಆಲ್ಕೋಹಾಲ್ ಪ್ರಮಾಣವು ಅಬಕಾರಿ ಕಾಯ್ದೆಯಡಿ ನಿಗಧಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಇರಬೇಕು.

Flower Show And Wine Utsav At Madikeri February 3 To 6

ಗಾಂಧಿ ಮೈದಾನದಲ್ಲಿ ವಿವಿಧ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ, ತೋಟಗಾರಿಕೆ, ಇತರೆ ಇಲಾಖೆಯ ವಸ್ತು ಪ್ರದರ್ಶನದ ಮಳಿಗೆ ಆಯೋಜಿಸಲಾಗುತ್ತದೆ. ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ.

ಅತ್ಯುತ್ತಮ ಹಣ್ಣು, ತರಕಾರಿ, ಮತ್ತಿತರ ಪ್ರದರ್ಶನಕ್ಕೆ ಬಹುಮಾನವನ್ನು ನೀಡಲಾಗುತ್ತದೆ. ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗುತ್ತಿದೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆಯ ಉಪ ನಿರ್ದೇಶಕರು ಕರೆ ನೀಡಿದ್ದಾರೆ.

ಜೇನು ಹಬ್ಬ ಆಯೋಜನೆ; ಡಿಸೆಂಬರ್ ತಿಂಗಳಿನಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ಕೃಷಿ ವಿಸ್ತರಣಾ ಘಟಕ, ಭಾಗಮಂಡಲ ಮತ್ತು ವಿರಾಜಪೇಟೆ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಇವರ ಸಹಯೋಗದಲ್ಲಿ ಜೇನು ಉತ್ಸವ ಆಯೋಜನೆ ಮಾಡಲಾಗಿತ್ತು.

ಮಡಿಕೇರಿ ರಾಜಸೀಟು ಸೇರಿದಂತೆ ವಿವಿಧ ಪ್ರದೇಶಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ವಿಶೇಷ ಮೇಳವನ್ನು ಆಯೋಜಿಸಲಾಗುತ್ತಿದೆ.

ಸಾರ್ವಜನಿಕರು ಹಾಗೂ ಪ್ರವಾಸಿಗರಿಂದ ಈ ಮೇಳಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ವೈನ್ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಜೊತೆಗೆ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ರಾಜಸೀಟು ಅಭಿವೃದ್ಧಿ; ಮಡಿಕೇರಿಯ ರಾಜಸೀಟು ಉದ್ಯಾನವನವನ್ನು 'ಗ್ರೇಟರ್ ರಾಜಸೀಟು' ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಜಾಸೀಟು ಉದ್ಯಾನವನ ವ್ಯಾಪ್ತಿಗೆ ರೈಲ್ವೆ ಟ್ರ್ಯಾಕ್ ಸೇರ್ಪಡೆಯಾಗಿದ್ದು, ಈ ಹಿನ್ನೆಲೆ ರಾಜಸೀಟು ಉದ್ಯಾನವನ್ನು ಗ್ರೇಟರ್ ರಾಜಸೀಟು ಆಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ತಯಾರಿಸಲಾಗಿತ್ತು.

ಪುಟಾಣಿ ರೈಲು ಸಂಚಾರ, ಮ್ಯೂಸಿಕಲ್ ಫೌಂಟೈನ್ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಬಗ್ಗೆ ಮಾಹಿತಿ ಇದ್ದು, ಕೂಡಲೇ ಸರಿಪಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಈಗಾಗಲೇ ಕೂರ್ಗ್ ವಿಲೇಜ್ ಉದ್ಘಾಟನೆಯಾಗಿದೆ.

English summary
Kodagu zilla panchayat and horticulture department organized flower show and wine utsav at Raja seat, Madikeri from February 3 to 6, 2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X