ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಂಗಪಟ್ಟಣ-ಕುಶಾಲನಗರ ನಡುವೆ ಚತುಷ್ಪಥ ರಸ್ತೆ

|
Google Oneindia Kannada News

ಮಡಿಕೇರಿ, ಫೆಬ್ರವರಿ 18; "ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ಚತುಷ್ಪಥ ರಸ್ತೆ ಕಾಮಗಾರಿಯು 15 ತಿಂಗಳಲ್ಲಿ ಆರಂಭವಾಗಲಿದೆ" ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು.

ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ" ಎಂದರು.

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ 6 ಪಥವಾಗಿ ಅಗಲೀಕರಣ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ 6 ಪಥವಾಗಿ ಅಗಲೀಕರಣ

"ಸಾರ್ವಜನಿಕರ ಅನುಕೂಲಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಶ್ರೀರಂಗಪಟ್ಟಣದಿಂದ ಕುಶಾಲನಗರದವರೆಗೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು" ಎಂದು ಸಂಸದರು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ರದ್ದು; ಸಚಿವ ಗಡ್ಕರಿ ಭರವಸೆ ಸುರತ್ಕಲ್ ಟೋಲ್ ಗೇಟ್ ರದ್ದು; ಸಚಿವ ಗಡ್ಕರಿ ಭರವಸೆ

Four Lane Road Between Srirangapatna Kushalnagar

"ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಸರಿಪಡಿಸಬೇಕು. ತಡೆಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಕುಶಾಲನಗರದ ತಾವರೆಕೆರೆ ಪ್ರತಿವರ್ಷ ಮಳೆಗಾಲದ ಅವಧಿಯಲ್ಲಿ ರಸ್ತೆ ಸಂಪರ್ಕ ವ್ಯತ್ಯಯ ಉಂಟಾಗುತ್ತಿದ್ದು, ರಸ್ತೆಯನ್ನು ಎತ್ತರಿಸುವಂತೆ" ಸಂಸದರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭಾರತ- ನೇಪಾಳ ನಡುವಿನ 108 ಕಿ.ಮೀ ಗಡಿ ರಸ್ತೆ ಸಾರ್ವಜನಿಕರಿಗೆ ಮುಕ್ತ ಭಾರತ- ನೇಪಾಳ ನಡುವಿನ 108 ಕಿ.ಮೀ ಗಡಿ ರಸ್ತೆ ಸಾರ್ವಜನಿಕರಿಗೆ ಮುಕ್ತ

"ಕುಶಾಲನಗರದಲ್ಲಿ ಹೊಸ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಹಾಗೆಯೇ ಕುಶಾಲನಗರದ 25 ಅಥವಾ 50 ಹಾಸಿಗೆಯ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ" ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.

English summary
4 lane road work between Srirangapatna-Kushalnagar will began in 15 months said Pratap Simha MP of Mysuru-Kodagu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X