ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ರಣ ಮಳೆಗೆ ಒಂದೇ ಕುಟುಂಬದ ನಾಲ್ವರ ಬಲಿ, ಓರ್ವ ಕಣ್ಮರೆ

|
Google Oneindia Kannada News

ಮಡಿಕೇರಿ, ಆಗಸ್ಟ್ 9 : ಕೊಡಗಿನ ಮಹಾಮಳೆಯ ರುದ್ರನರ್ತನಕ್ಕೆ ಮಡಿಕೇರಿಯ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದು ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

3 ತಿಂಗಳಲ್ಲಿ ಮಹಾ ಮಳೆಗೆ ಬಲಿಯಾದವರೆಷ್ಟು? ಇಲ್ಲಿದೆ ಮಾಹಿತಿ
ಮಡಿಕೇರಿ ತಾಲೂಕಿನ ಕೋರಂಗಾಲ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಸಂಪೂರ್ಣ ನೆಲಸಮ ಆಗಿದೆ. ಹೀಗಾಗಿ ಮನೆಯಲ್ಲಿಯೇ ಇದ್ದ ನಾಲ್ವರು ಸಾವಿಗೀಡಾಗಿದ್ದಾರೆ. ಕುಟುಂಬದ ಯಶ್ವಂತ್, ಬಾಲಕೃಷ್ಣ್, ಯಮುನ್, ಉದಯ ಎಂಬುವವರ ಮೃತದೇಹ ಈಗಾಗಲೇ ಸಿಕ್ಕಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಣೆ ಮಾಡಲಾಗಿದೆ.

Four peoples from one family died in Kodagu
ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಇದುವರೆಗೆ 25 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 604 ಕುಟುಂಬಗಳ ಒಟ್ಟು 2136 ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಹಾಗೆಯೇ 58 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯ 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಹಲವರು ಭೇಟಿ ನೀಡಿ ಮಳೆ ಅನಾಹುತ ಪರಿಶೀಲನೆ ನಡೆಸುತ್ತಿದ್ದಾರೆ.

Four peoples from one family died in Kodagu
ಒಂದು ದಿನದಲ್ಲಿ 200 ಮಿ.ಮೀ. ಮಳೆಯಾಗಿದೆ ಎಂದು ತಿಳಿದುಬಂದಿದೆ. ರಭಸದಿಂದ ಬೀಸುತ್ತಿರುವ ಗಾಳಿಯಿಂದಾಗಿ ಇದೀಗ ಹಲವು ಮೊಬೈಲ್ ಟವರ್ ಗಳು ಕಾರ್ಯಾಚರಿಸುತ್ತಿಲ್ಲ.
English summary
Four people from one family died in heavy Landslide at Kodagu. 200 mm rain is going on at district surroundings
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X