ತಾಯಿಯ ಮೊಬೈಲ್ ಕೊಡಿಸಿ, ಕೊಡಗು ಬಾಲಕಿ ವಿಡಿಯೋ ವೈರಲ್
ಮಡಿಕೇರಿ, ಮೇ 23; "ನನ್ನ ಜೀವನದ ಅಮೂಲ್ಯ ಜೀವವಾಗಿದ್ದ ತಾಯಿ ಹೋಗಿಬಿಟ್ಟರು. ಅವರ ನನ್ನ ನೆನಪಾಗಿ ಇರುವುದು ಅಮೂಲ್ಯ ಫೋಟೋಗಳು. ಆ ಮೊಬೈಲ್ ಕಳೆದು ಹೋಗಿದೆ. ದಯವಿಟ್ಟು ಮೊಬೈಲ್ ಕೊಡಿಸಿಕೊಡಿ" ಎಂದು ಬಾಲಕಿ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಪುಟ್ಟ ಬಾಲಕಿ ಹೃತಿಕ್ಷಳಿಗೆ ಮತ್ತು ಅವಳ ತಂದೆ-ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಮಗಳು ಮತ್ತು ದಿನಗೂಲಿ ನೌಕರರಾದ ತಂದೆ ಮನೆಯಲ್ಲೇ ಕ್ವಾರಂಟೈನ್‌ಆಗಿ ಚಿಕಿತ್ಸೆ ಪಡೆದರು. ತಾಯಿಯನ್ನು ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೇ 16 ರಂದು ಚಿಕಿತ್ಸೆ ಫಲಿಸದೆ ಆಕೆಯ ತಾಯಿ ಮೃತಪಟ್ಟರು. ಆ ವೇಳೆ ತಾಯಿಯ ಜೊತೆಗಿದ್ದ ಮೊಬೈಲ್ ವಾಪಸ್ ಸಿಕ್ಕಿರಲಿಲ್ಲ.
ಆ ಮೊಬೈಲ್ನಲ್ಲಿ ತನ್ನ ತಾಯಿಯ ಫೋಟೋಗಳು ಮತ್ತು ಇತರ ನೆನಪುಗಳು ಇವೆ ಎಂಬ ಕಾರಣಕ್ಕೆ ಇದೀಗ ಹೃತಿಕ್ಷ ಅದನ್ನು ವಾಪಸ್ ಪಡೆಯುವ ಕಾತರದಲ್ಲಿದ್ದಾಳೆ. ಇದಕ್ಕಾಗಿ ಜಿಲ್ಲಾಧಿಕಾರಿಗಳಿಗೆ, ಶಾಸಕರಿಗೆ ಮತ್ತು ಮಡಿಕೇರಿ ಕೋವಿಡ್ ಆಸ್ಪತ್ರೆಯ ಸಿಬ್ಬಂದಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾಳೆ.

"ನಾನು ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದೇನೆ. ನನ್ನ ತಾಯಿಯ ನೆನಪುಗಳು ಆ ಮೊಬೈಲ್‌ನಲ್ಲಿರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದರೆ ಅಥವಾ ಯಾರಿಗಾದರೂ ಸಿಕ್ಕಿದ್ದರೆ ದಯವಿಟ್ಟು ಈ ತಬ್ಬಲಿಗೆ ಅದನ್ನು ತಲುಪಿಸಿ" ಎಂದು ಸಾರ್ವಜನಿಕವಾಗಿ ಮನವಿ ಮಾಡಿದ್ದಾಳೆ.
ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಈ ಮೊಬೈಲ್ ಅಲ್ಲದೆ ಇನ್ನೂ ಅನೇಕರ ಮೊಬೈಲ್ ಕಳವಾಗಿದೆ. ರೋಗಿಗಳು ಮೃತಪಟ್ಟರೆ ಅವರ ಬೆಲೆಬಾಳುವ ವಸ್ತುಗಳು ಅವರಿಗೆ ಸಿಗುತ್ತಿಲ್ಲ. ಅಮೂಲ್ಯ ಜೀವವೇ ಹೋದ ಮೇಲೆ ಮೊಬೈಲ್ ಏನು ಎಂದು ರೋಗಿಗಳ ಸಂಬಂಧಿಕರು ನಿರಾಸಕ್ತಿ ವಹಿಸುತ್ತಿದ್ದಾರೆ.
ಇದರಿಂದಾಗಿ ಕಳ್ಳರಿಗೆ ಮತ್ತೆ ಮತ್ತೆ ಕದಿಯಲು ಪ್ರೋತ್ಸಾಹ ನೀಡಿದಂತಾಗಿದೆ. ಈ ಬಾಲಕಿಯ ಮೊಬೈಲ್ ದೂರು ವೈರಲ್ ಆಗಿರುವುದರಿಂದ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್ ಹುಡುಕಿಸಿಕೊಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications