ಸರ್ಕಾರಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ನೀಡಲು ಸುವರ್ಣಾವಕಾಶ
ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ
ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ದೂರವಾಣಿ ಸಂಖ್ಯೆ: 1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆ ವರೆಗೂ ಸಂಪರ್ಕಿಸುವAತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications