ಕೊಡಗು: ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ, 9.85 ಲಕ್ಷಕ್ಕೆ ಮನೆ
ಬೆಂಗಳೂರು, ಡಿಸೆಂಬರ್ 06: ಕೊಡಗು ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗಾಗಿ 850 ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ನಾಳೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 31.65 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಡಾವಣೆಯನ್ನು ನಿರ್ಮಾಣ ಮಾಡಲಾಗುತ್ತದೆ ಒಟ್ಟು ಐದು ಕಡೆ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರತಿ ಮನೆಗೆ 9.85 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದ್ದು, ಈ ಮನೆಗಳು ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿರಲಿದ್ದು, ಆಧುನಿಕ ರೀತಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಾಗಿವೆ ಎಂದು ಹೇಳಿದರು.

ಮನೆ ಕಳೆದುಕೊಂಡವರಿಗೆ ಅವರಿಗೆ ಬೇಕಾದ ಸ್ಥಳದಲ್ಲಿಯೇ ನಿವೇಶನ ನೀಡಿ, ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಜೊತೆಗೆ ಬಾಡಿಗೆ ಹಣದ ಚೆಕ್ ಸಹ ನಾಳೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆಯ ಸ್ಥಳವನ್ನು ಸಿಎಂ ಆದೇಶದಂತೆ ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿ ಮನೆ ನಿರ್ಮಾಣ ಮಾಡುತ್ತಿದ್ದು, ಈ ಮನೆಗಳು ಪೂರ್ಣ ಸುಸಜ್ಜಿತವಾಗಿದ್ದು, ಭದ್ರತೆಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ನಾಳೆ ಮಡಿಕೇರಿಯಲ್ಲಿ ಕುಮಾರಸ್ವಾಮಿ ಅವರು ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಆರು ತಿಂಗಳ ಒಳಗಾಗಿ ವಸತಿ ಬಡಾವಣೆ ನಿರ್ಮಾಣ ಕಾಮಾರಿ ಪೂರ್ಣವಾಗಲಿದೆ.
ಮನೆ ಕಳೆದುಕೊಂಡವರಿಗೆ ಬಾಡಿಗೆ ಹಣದ ಚೆಕ್ ಸಹ












Click it and Unblock the Notifications