ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು: ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ, 9.85 ಲಕ್ಷಕ್ಕೆ ಮನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 06: ಕೊಡಗು ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗಾಗಿ 850 ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ನಾಳೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 31.65 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಡಾವಣೆಯನ್ನು ನಿರ್ಮಾಣ ಮಾಡಲಾಗುತ್ತದೆ ಒಟ್ಟು ಐದು ಕಡೆ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೊಡಗು ಸಂತ್ರಸ್ತರಿಗೆ 50 ಮನೆ ಕಟ್ಟಿಕೊಡಲು ರೋಟರಿ ತಂಡ ಸನ್ನದ್ಧ ಕೊಡಗು ಸಂತ್ರಸ್ತರಿಗೆ 50 ಮನೆ ಕಟ್ಟಿಕೊಡಲು ರೋಟರಿ ತಂಡ ಸನ್ನದ್ಧ

ಪ್ರತಿ ಮನೆಗೆ 9.85 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದ್ದು, ಈ ಮನೆಗಳು ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿರಲಿದ್ದು, ಆಧುನಿಕ ರೀತಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಾಗಿವೆ ಎಂದು ಹೇಳಿದರು.

Government bulding house in Kodagu for them who lost house

ಮನೆ ಕಳೆದುಕೊಂಡವರಿಗೆ ಅವರಿಗೆ ಬೇಕಾದ ಸ್ಥಳದಲ್ಲಿಯೇ ನಿವೇಶನ ನೀಡಿ, ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಜೊತೆಗೆ ಬಾಡಿಗೆ ಹಣದ ಚೆಕ್ ಸಹ ನಾಳೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಕೊಡಗಿಗೆ ದೇಣಿಗೆ ನೀಡಿ ಹೃದಯವಂತಿಕೆ ಮೆರೆದ ಕತಾರ್ ಭಾರತೀಯರು ಕೊಡಗಿಗೆ ದೇಣಿಗೆ ನೀಡಿ ಹೃದಯವಂತಿಕೆ ಮೆರೆದ ಕತಾರ್ ಭಾರತೀಯರು

ಮನೆ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆಯ ಸ್ಥಳವನ್ನು ಸಿಎಂ ಆದೇಶದಂತೆ ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿ ಮನೆ ನಿರ್ಮಾಣ ಮಾಡುತ್ತಿದ್ದು, ಈ ಮನೆಗಳು ಪೂರ್ಣ ಸುಸಜ್ಜಿತವಾಗಿದ್ದು, ಭದ್ರತೆಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ

Government bulding house in Kodagu for them who lost house

ನಾಳೆ ಮಡಿಕೇರಿಯಲ್ಲಿ ಕುಮಾರಸ್ವಾಮಿ ಅವರು ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಆರು ತಿಂಗಳ ಒಳಗಾಗಿ ವಸತಿ ಬಡಾವಣೆ ನಿರ್ಮಾಣ ಕಾಮಾರಿ ಪೂರ್ಣವಾಗಲಿದೆ.

ಮನೆ ಕಳೆದುಕೊಂಡವರಿಗೆ ಬಾಡಿಗೆ ಹಣದ ಚೆಕ್‌ ಸಹ

English summary
Karnataka government building house in Kodagu for them who lost their house in flood two months back. CK Kumaraswamy will hoist green flag to house building work tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X