ಮಡಿಕೇರಿ ದಸರಾ 2023; ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಮಡಿಕೇರಿ, ಅಕ್ಟೋಬರ್ 08; ಕರ್ನಾಟಕ ಸರ್ಕಾರ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ 2023ಕ್ಕೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಈ ಬಾರಿ ಅಕ್ಟೋಬರ್ 15ರಂದು ಕರಗ ಉತ್ಸವದ ಆರಂಭದೊಂದಿಗೆ ಮಡಿಕೇರಿ ದಸರಾಗೆ ಚಾಲನೆ ಸಿಗಲಿದೆ, ಅಕ್ಟೋಬರ್ 24ರ ತನಕ ದಸರಾ ನಡೆಯಲಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್. ಗೀತಾಬಾಯಿ ಸರ್ಕಾರದ ಅಧೀನ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಸಂಸ್ಕೃತಿ) ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾರೆ.

madikeri-dasara-2023

2023ನೇ ಸಾಲಿನಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಉತ್ಸವ ಆಚರಣೆಗೆ ಅನುದಾನ ಬಿಡುಗಡೆ ಮಾಡುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ ಇವರ ಪತ್ರ ದಿನಾಂಕ 2/6/2023 ಮತ್ತು ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ದಿನಾಂಕ 9/9/2023 ಉಲ್ಲೇಖಿಸಲಾಗಿದೆ.

ಆದೇಶದ ವಿವರ; 2023-24ನೇ ಸಾಲಿನಲ್ಲಿ ಏರ್ಪಡಿಸುವ ಮಡಿಕೇರಿ ದಸರಾ ಮತ್ತು ಗೋಣಿಕೊಪ್ಪ ದಸರಾ ಉತ್ಸವಕ್ಕೆ ಅನುದಾನವನ್ನು ಒದಗಿಸುವಂತೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಜಿಲ್ಲೆ ಅವರು ಕೋರಿರುತ್ತಾರೆ.

ಅನಧಿಕೃತ ಟಿಪ್ಪಣಿಯಲ್ಲಿ 2023-24ನೇ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕಾಗಿ ರೂ. 75 ಲಕ್ಷಗಳನ್ನು ಹಾಗೂ ಗೋಣಿಕೊಪ್ಪ ದಸರಾ ಉತ್ಸವಕ್ಕೆ ರೂ. 50 ಲಕ್ಷಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯು ತಿಳಿಸಿರುತ್ತದೆ. ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿದೆ.

ಸರ್ಕಾರದ ಆದೇಶ ಸಂಖ್ಯೆ ದಿನಾಂಕ 07/10/2023ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023ನೇ ಸಾಲಿನಲ್ಲಿ ಮಡಿಕೇರಿ ದಸರಾ ಉತ್ಸವಕ್ಕೆ ರೂ.75 ಲಕ್ಷಗಳನ್ನು ಹಾಗೂ ಗೋಣಿಕೊಪ್ಪ ದಸರಾ ಉತ್ಸವ ಆಚರಣೆಗೆ ರೂ. 50 ಲಕ್ಷಗಳು ಒಟ್ಟು ರೂ.125 ಲಕ್ಷಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಮುಖಾಂತರ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಷರತ್ತುಗಳಿಗೊಳಪಟ್ಟು ಬಿಡುಗಡೆ ಮಾಡಲು ಸರ್ಕಾರದ ಮಂಜೂರಾತಿ ನೀಡಿದೆ ಎಂದು ತಿಳಿಸಿದೆ.

ಷರತ್ತುಗಳು

* ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಮಹೋತ್ಸವ-2023ಕ್ಕೆ ಮಂಜೂರು ಮಾಡಿರುವ ಅನುದಾನವನ್ನು ಅದೇ ಉದ್ದೇಶಕ್ಕೆ ಬಳಸತಕ್ಕದ್ದು.

* ಬಿಡುಗಡೆ ಮಾಡಿದ ಅನುದಾನ ಸಮರ್ಪಕವಾಗಿ ಬಳಕೆಯಾದ ಬಗ್ಗೆ ಉಪಯುಕ್ತ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

* ಕಾರ್ಯಕ್ರಮ ನಡೆದಿರುವ ಬಗ್ಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಂದ ಖಾತ್ರಿಪಡಿಸಿಕೊಳ್ಳತಕ್ಕದ್ದು.

* ಹಣ ಬಳಕೆ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ ಇವರಿಂದ ಪಡೆಯತಕ್ಕದ್ದು.

* ಕರ್ನಾಟಕ ಸಾರ್ವನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999-2000 ನಿಯಮ ಮತ್ತು ಸರ್ಕಾರ ಆಗಿಂದಾಗ್ಗೆ ಹೊರಡಿಸಿದ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಅಧ್ಯಕತೆಯಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ 2023ರ ಆಚರಣೆ ಕುರಿತು ಸಭೆ ನಡೆದಿತ್ತು. ಸಭೆಯಲ್ಲಿ ಸಚಿವರು "ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ದಸರಾಗೆ ಯಾವುದೇ ರೀತಿ ತೊಂದರೆಯಾಗದಂತೆ ಹಣ ಬಿಡುಗಡೆ ಮಾಡಿಸಲಾಗುವುದು" ಎಂದು ಭರವಸೆ ನೀಡಿದ್ದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, "ಈ ಹಿಂದೆ ಮಡಿಕೇರಿ ದಸರಾ ಸಮಿತಿಯ ಬೈಲಾ ಪ್ರಕಾರ ಕಾರ್ಯಕ್ರಮ ಆಯೋಜಿಸಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ನಾಲ್ಕು ಕರಗ ಉತ್ಸವದೊಂದಿಗೆ ಮಡಿಕೇರಿ ದಸರಾ ಆರಂಭವಾಗಲಿದ್ದು, ವಿಜಯದಶಮಿಯಂದು ರಾತ್ರಿ ವೇಳೆಯಲ್ಲಿ ದಶಮಂಟಪಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಲಿದೆ" ಎಂದು ಹೇಳಿದ್ದರು.

ಮಡಿಕೇರಿ ದಸರಾಗೆ ಕಳೆದ ಬಾರಿ 1 ಕೋಟಿ ರೂ. ಪ್ರಸ್ತಾವನೆಯಲ್ಲಿ 75 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಉಳಿದ 25 ಲಕ್ಷ ರೂ. ಬಿಡುಗಡೆ ಮಾಡಬೇಕಿದೆ ಎಂದು ಸಭೆಯಲ್ಲಿ ಚರ್ಚೆ ನಡೆದಿತ್ತು. ಮಡಿಕೇರಿ ದಸರಾಗೆ ಸುಮಾರು 200 ವರ್ಷಗಳ ಇತಿಹಾಸವಿದೆ. ನಾಲ್ಕು ಕರಗ ಉತ್ಸವಗಳೊಂದಿಗೆ ದಸರಾ ಆರಂಭವಾಗಲಿದ್ದು ಸುಮಾರು ಒಂದೂವರೆ ಲಕ್ಷ ಜನರು ದಸರಾಗೆ ಸೇರುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+