ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.20ರಂದು ತಲಕಾವೇರಿಯಲ್ಲಿ ಕುಮಾರಸ್ವಾಮಿಯಿಂದ ವಿಶೇಷ ಪೂಜೆ

By Gururaj
|
Google Oneindia Kannada News

ಮಡಿಕೇರಿ, ಜುಲೈ 15 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜು.20ರಂದು ತಲಕಾವೇರಿಗೆ ಭೇಟಿ ನೀಡತ್ತಿದ್ದಾರೆ. 2007ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಈ ಬಾರಿ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ರಾಜ್ಯದ ಪ್ರಮುಖ ಜಲಾಶಯವಾದ ಕೆಆರ್‌ಎಸ್ ಭರ್ತಿಯಾಗಿದೆ. ಆದ್ದರಿಂದ, ಕುಮಾರಸ್ವಾಮಿ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಜೀವಸೆಲೆಯಾದ ತಾಯಿಗೆ ತಲೆಬಾಗಿ : ಕಾವೇರಮ್ಮ... ಕಾಪಾಡಮ್ಮ... ಜೀವಸೆಲೆಯಾದ ತಾಯಿಗೆ ತಲೆಬಾಗಿ : ಕಾವೇರಮ್ಮ... ಕಾಪಾಡಮ್ಮ...

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮಳೆಯಿಂದ ಆಗಿರುವ ಅನಾಹುತ ಹಾಗೂ ಪರಿಹಾರ ನೀಡುವ ಸಂಬಂಧ ಜುಲೈ 19ರಂದು ಮಡಿಕೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ' ಎಂದು ಸಚಿವರು ಹೇಳಿದರು.

HD Kumaraswamy to perform special pooja in Talakaveri

2007ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. 11 ವರ್ಷಗಳ ಬಳಿಕ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ತಲಕಾವೇರಿಗೆ ಭೇಟಿ ನೀಡುತ್ತಿದ್ದಾರೆ.

ತಲಕಾವೇರಿ: ಬ್ರಹ್ಮಗಿರಿ ಬೆಟ್ಟವನ್ನೇರಲು ನಿರ್ಬಂಧ ಇಲ್ಲ!ತಲಕಾವೇರಿ: ಬ್ರಹ್ಮಗಿರಿ ಬೆಟ್ಟವನ್ನೇರಲು ನಿರ್ಬಂಧ ಇಲ್ಲ!

ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಭಾರೀ ಮಳೆಯ ಕಾರಣ ಭಾಗಮಂಡ ಮತ್ತು ಇತರ ಪ್ರದೇಶಗಳು ಜಲಾವೃತವಾಗಿವೆ. ಕಾವೇರಿ ನದಿ ತುಂಬಿ ಹರಿಯುತ್ತಿದೆ.

English summary
Karnataka chief minister H.D.Kumaraswamy will visit Talakaveri on July 20, 2018 and perform special pooja. Talakaveri the birthplace of the river Cauvery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X