ಕೊಡಗಿಗೆ ಸಾಂಕ್ರಾಮಿಕ ರೋಗಗಳ ಭೀತಿ ಇಲ್ಲ: ಆರೋಗ್ಯ ಇಲಾಖೆ

ಬೆಂಗಳೂರು, ಆಗಸ್ಟ್ 23: ಭೀಕರ ಪ್ರವಾಹದಿಂದ ನಲುಗಿರುವ ಕೊಡಗಿಗೆ ಸಾಂಕ್ರಾಮಿಕ ರೋಗದ ಭೀತಿ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಿಡಿಸಿದೆ.

ಎಲ್ಲರೂ ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ ಸೇರಿದಂತೆ ಕೊಡಗು ಸುತ್ತಮುತ್ತ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿತ್ತು, ಆದರೆ ಇದೀಗ ಆರೋಗ್ಯ ಇಲಾಖೆಯೇ ಖುದ್ದಾಗಿ ಈ ಕುರಿತು ಸ್ಪಷ್ಟನೆ ನೀಡಿದ್ದು ಜನರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಸ್ಥಳೀಯರು ಖುದ್ದಾಗಿ ತಾವಿರುವ ಪರಿಹಾರ ಕೇಂದ್ರಗಳನ್ನು ಸ್ವಚ್ಛವಾಗಿಡಲು ಮುಂದಾಗಿದ್ದು, ಶೌಚಾಲಯ ಸೇರಿದಂತೆ ಇನ್ನಿತರೆ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಭಾರಿ ಮಳೆಗೆ ಉಂಟಾಗಿರುವ ಪ್ರವಾಹದಿಂದ ಕೇರಳದಲ್ಲಿ ಈಗಾಗಲೇ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಹಾಗಾಗಿ ಕೊಡಗಿನಲ್ಲೂ ಇದೇ ಪರಿಸ್ಥಿತಿ ಬರಬಹುದು ಎನ್ನುವ ಆತಂಕ ನಿರ್ಮಾಣ ನಿರ್ಮಾಣವಾಗಿತ್ತು.

Health department clarifies no communicable diseases in Kodagu district

ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಧಿಕಾರಿಗಳು ಕೊಡಗಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಡಗಿನಲ್ಲಿ ಸಾಂಕ್ರಾಮಿಕ ರೋಗಗಳ ಭಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಡಗಿನಲ್ಲಿ ಸಂತ್ರಸ್ತರಿಗೆ ವೈದ್ಯ ಸೇವೆ ನೀಡಲು ರಾಜ್ಯದ ವಿವಿಧ ಭಾಗಗಳಿಂದ ನೂರಕ್ಕೂ ಹೆಚ್ಚು ವೈದ್ಯರು ಕೊಡಗಿಗೆ ತೆರಳಿದ್ದು, ಅಗತ್ಯ ಇರುವವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಸಂತ್ರಸ್ತರ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ, ರೋಗದ ಭೀತಿಯೂ ಇಲ್ಲ ಸಂತ್ರಸ್ತರಿಗೆ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹೀಗಾಗಿ ಹೆಚ್ಚುವರಿ ವೈದ್ಯರನ್ನು ವಾಪಸ್‌ ತೆರಳುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+