ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು; ಮಳೆ, ಗಾಳಿಗೆ ಇದುವರೆಗೆ 52.39 ಕೋಟಿ ರೂ. ನಷ್ಟ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 26; ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಜೂನ್ ತಿಂಗಳಿನಿಂದ ಸಂಭವಿಸಿರುವ ಮಳೆ, ಗಾಳಿಯಿಂದಾಗಿ ಇಲ್ಲಿಯವರೆಗೂ 52.39 ಕೋಟಿ ರೂ. ನಷ್ಟ ಉಂಟಾಗಿದೆ. ವಿವಿಧ ಮೂಲಭೂತ ಸೌಕರ್ಯಗಳು ಸೇರಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ.

ಇದುವರೆಗೂ ಆಗಿರುವ ಹಾನಿ ಬಗ್ಗೆ ಕೊಡಗು ಜಿಲ್ಲಾಡಳಿತ ವರದಿ ಸಂಗ್ರಹಿಸಿದೆ. ಲೋಕೋಪಯೋಗಿ ಇಲಾಖೆಗೆ 17.61 ಕೋಟಿ ರೂ., ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ 2.79 ಕೋಟಿ ರೂ., ವಿದ್ಯುತ್ ಇಲಾಖೆಗೆ 2.29 ಕೋಟಿ ರೂ. ಗಳ ನಷ್ಟ ಸಂಭವಿಸಿದೆ.

ಕೊಡಗು ವಿಶೇಷ; 'ಕಕ್ಕಡ ಮಾಸ' ಎಂದರೆ ಬಿಡುವಿಲ್ಲದ ದುಡಿಮೆ ಕಾಲ!ಕೊಡಗು ವಿಶೇಷ; 'ಕಕ್ಕಡ ಮಾಸ' ಎಂದರೆ ಬಿಡುವಿಲ್ಲದ ದುಡಿಮೆ ಕಾಲ!

ರಾಷ್ಟ್ರೀಯ ಹೆದ್ದಾರಿ ಹಾನಿಯಿಂದ 1.75 ಕೋಟಿ, ಸಣ್ಣ ನೀರಾವರಿ ಅಂರ್ತಜಲ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ 21.40 ಕೋಟಿ, ಪಿ.ಎಂ.ಜಿ.ಎಸ್.ವೈ.ಯಲ್ಲಿ 5 ಲಕ್ಷ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 6.50 ಕೋಟಿ ಸೇರಿದಂತೆ ಒಟ್ಟು 52.39 ಕೋಟಿಗಳಷ್ಟು ನಷ್ಟ ಜಿಲ್ಲೆಯಲ್ಲಿ ಆಗಿದೆ.

 ಕೊಡಗು ಜಿಲ್ಲೆಯ 5ನೇ ತಾಲ್ಲೂಕಾಗಿ ಕುಶಾಲನಗರ ಅಸ್ತಿತ್ವಕ್ಕೆ ಕೊಡಗು ಜಿಲ್ಲೆಯ 5ನೇ ತಾಲ್ಲೂಕಾಗಿ ಕುಶಾಲನಗರ ಅಸ್ತಿತ್ವಕ್ಕೆ

ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 16.55 ಕಿ.ಮೀ. ರಾಜ್ಯ ಹೆದ್ದಾರಿ, 9.89 ಕಿ.ಮೀ. ಹಾಗೂ ಜಿಲ್ಲಾ ಮುಖ್ಯ ರಸ್ತೆ ಹಾನಿಯಿಂದ ರೂ. 15.71 ಕೋಟಿ, ಸೇತುವೆ ಮೋರಿ ಹಾನಿಯಿಂದ 1.74 ಕೋಟಿ ಹಾಗೂ ಕಟ್ಟಡ ಹಾನಿಯಿಂದ 15.50 ಲಕ್ಷದಷ್ಟು ನಷ್ಟ ಸಂಭವಿಸಿದೆ.

ಕೊಡಗು: ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶಕೊಡಗು: ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ

ಮಳೆಯಿಂದಾಗಿ ರಸ್ತೆಗೆ ಹಾನಿ

ಮಳೆಯಿಂದಾಗಿ ರಸ್ತೆಗೆ ಹಾನಿ

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ 215 ಕಿ.ಮೀ. ರಸ್ತೆ 4 ಸೇತುವೆ, 2 ಮೋರಿ, 9 ತಡೆಗೋಡೆ ಹಾನಿಯಿಂದ 2.79 ಕೋಟಿ ನಷ್ಟದ ಅಂದಾಜು ಮಾಡಲಾಗಿದೆ. ವಿದ್ಯುತ್ ಇಲಾಖೆಯಲ್ಲಿ 1,358 ಕಂಬಗಳು, 85 ಟ್ರಾನ್ಸ್ ಫಾರ್ಮ್‍ಗಳು, 20.26 ಕಿ.ಮೀ.ನಷ್ಟು ವಿದ್ಯುತ್ ವಾಹಕಗಳ ಹಾನಿಯಿಂದ 2.29 ಕೋಟಿ ನಷ್ಟವಾಗಿದೆ. ಎರಡು ಕಿ.ಮೀ.ನಷ್ಟು ರಾಷ್ಟ್ರೀಯ ಹೆದ್ದಾರಿ ಹಾನಿಯಿಂದ 1.75 ಕೋಟಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದಲ್ಲಿ ಒಟ್ಟು 53, ನಾಲೆ, ಏರಿ, ಕೆರೆ ಹಾನಿಯಿಂದ 21.40 ಕೋಟಿ ಹಾನಿಯಾಗಿದೆ.

ನಗರಾಭಿವೃದ್ಧಿ ಇಲಾಖೆ

ನಗರಾಭಿವೃದ್ಧಿ ಇಲಾಖೆ

ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ, ಕುಶಾಲನಗರ, ಸೋಮವಾರಪೇಟೆ, ವೀರಾಜಪೇಟೆ ಪಟ್ಟಣ ಪಂಚಾಯಿತಿಗಳಲ್ಲಿ ಒಟ್ಟು 6.50 ಕೋಟಿಯಷ್ಟು ನಷ್ಟ ಉಂಟಾಗಿದೆ. ಮಡಿಕೇರಿ ತಾಲೂಕಿನಲ್ಲಿ ಪ್ರವಾಹಕ್ಕೆ ಒಬ್ಬರು ಬಲಿಯಾಗಿದ್ದು, ಇವರ ಕುಟುಂಬದವರಿಗೆ 7 ಲಕ್ಷ ನೀಡಲಾಗಿದೆ. ಒಟ್ಟು 5 ಜಾನುವಾರುಗಳು ಸಾವಿಗೀಡಾಗಿವೆ. 2 ಮನೆಗಳು ಪೂರ್ಣ ಜಖಂ ಆಗಿದ್ದು,11 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಹಾಗೂ 34 ಮನೆಗಳಿಗೆ ಅಲ್ಪಸ್ವಲ್ಪ ಹಾನಿಯಾಗಿದ್ದು, ಇದರಿಂದ 13.50 ಲಕ್ಷ ನಷ್ಟವಾಗಿದೆ.

ಪ್ರವಾಹದ ಆತಂಕ ತಪ್ಪಿಲ್ಲ

ಪ್ರವಾಹದ ಆತಂಕ ತಪ್ಪಿಲ್ಲ

ಕೊಡಗು ಜಿಲ್ಲೆಯಲ್ಲಿ ಶನಿವಾರದಿಂದ ಸ್ವಲ್ಪ ಮಟ್ಟಿಗೆ ಮಳೆ ಆರ್ಭಟ ತಗ್ಗಿದ್ದರೂ ಪ್ರವಾಹದ ಆತಂಕ ಮಾತ್ರ ತಪ್ಪಿಲ್ಲ. ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಕಾವೇರಿ ನದಿ ಈಗಲೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನದಿ ತಟದಲ್ಲಿರುವ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ಇನ್ನೂ ಪ್ರವಾಹದ ಆತಂಕವಿದೆ. ಕಳೆದ ಒಂದು ವಾರದಿಂದ ಸುರಿದ ಮಹಾಮಳೆಗೆ ವಿರಾಜಪೇಟೆ ಪಟ್ಟಣದ ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿದೆ. ಮಾರುಕಟ್ಟೆ ಕಟ್ಟಡ ಸಾಕಷ್ಟು ಶಿಥಿಲವಾಗಿತ್ತು. ಹೀಗಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಟ್ಟಡದಿಂದ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದರು.

Recommended Video

ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ |Oneindia Kannada
ಎನ್‌ಡಿಆರ್‌ಎಫ್ ತಂಡವಿದೆ

ಎನ್‌ಡಿಆರ್‌ಎಫ್ ತಂಡವಿದೆ

ವಿರಾಜಪೇಟೆ ಪಟ್ಟಣದ ಮಾರುಕಟ್ಟೆ ಕಟ್ಟಡದ ಎರಡು ಮಳಿಗೆಗಳು ಕುಸಿದು ಬಿದ್ದಿವೆ. ಒಂದು ವೇಳೆ ಮಳಿಗೆಗಳಿಂದ ಅಂಗಡಿಗಳನ್ನು ಖಾಲಿ ಮಾಡಿಸಿ, ವ್ಯಾಪಾರಿಗಳ ತೆರವು ಮಾಡದಿದ್ದಲ್ಲಿ ಅನಾಹುತವೇ ಸಂಭವಿಸುತ್ತಿತ್ತು. ಕಟ್ಟಡ ಸಾಕಷ್ಟು ಶಿಥಿಲವಾಗಿದ್ದರೂ ಯಾವುದೇ ಮೂಲಸೌಲಭ್ಯ ನೀಡದೆ ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದ್ದೇ ಕಟ್ಟಡ ಕುಸಿದು ಬೀಳಲು ಮುಖ್ಯ ಕಾರಣ ಎಂದು ಸ್ಥಳೀಯ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಜಿಲ್ಲೆಯಲ್ಲೇ ಬೀಡು ಬಿಟ್ಟಿದ್ದು ಯಾವುದೇ ರೀತಿಯ ಅಪಾಯದಿಂದ ಜನರನ್ನು ರಕ್ಷಿಸಲು ಸಜ್ಜಾಗಿದೆ.

English summary
52.39 crore loss due to heavy rain in Kodagu district. 17.16 crore loss for the PWD department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X