ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರಿ ಮಳೆ ಮುನ್ಸೂಚನೆ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್

|
Google Oneindia Kannada News

ಮಡಿಕೇರಿ, ಜುಲೈ 8: ಕೊಡಗು ಜಿಲ್ಲೆಯ ಗುಡ್ಡಗಾಡು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿದಿದ್ದು, ಗುಡ್ಡ ಕುಸಿತವೂ ಉಂಟಾಗಿದೆ. ಇದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಮಳೆಯೂ ಇನ್ನೂ ಮುಂದಿನ ಎರಡು ದಿನಗಳ ಕಾಲ ಮುಂದುವರೆಯಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸದರಿ ಗುಡ್ಡಗಾಡು ಪ್ರದೇಶದಲ್ಲಿ ವಾಸವಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಬಿರುಸುಗೊಂಡ ಮಳೆಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಬಿರುಸುಗೊಂಡ ಮಳೆ

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

Heavy Rain Forecast: Red Alert In Kodagu District

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಯದಲ್ಲಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಈ ಪ್ರಕಟಣೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಹೊರಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Heavy Rain Forecast: Red Alert In Kodagu District

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ- 24*7 ಕಂಟ್ರೋಲ್ ರೂಂ: 08272-221077, ವಾಟ್ಸಾಪ್ ಸಂಖ್ಯೆ: 8550001077. ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೊಡಗು ಜಿಲ್ಲೆ.

English summary
Heavy rainfall has been reported over the last three days in the hilly areas of Kodagu district and has caused a landslide. The red alert was announce in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X