ಕೊಡಗು ಜಿಲ್ಲೆಯಲ್ಲಿ 4 ದಿನ ಭಾರಿ ಮಳೆ ಎಚ್ಚರಿಕೆ

ಮಡಿಕೇರಿ, ಆಗಸ್ಟ್ 05 : ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

      ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆಯಲ್ಲಿ ಕೊಡಗು ಜಿಲ್ಲಾಡಳಿತ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದೆ. ಆಗಸ್ಟ್ 6 ರಿಂದ 10ರ ತನಕ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

      ಆಗಸ್ಟ್ 6ರ ಬೆಳಗ್ಗೆಯಿಂದ 7ರ ತನಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 115.6 ರಿಂದ 204.4 ಮಿ. ಮೀ. ತನಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

      Heavy Rain IMD Issues Alert For Kodagu District

      ಆಗಸ್ಟ್ 7ರ ಬೆಳಗ್ಗೆಯಿಂದ ಆಗಸ್ಟ್ 8ರ ಬೆಳಗ್ಗೆ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 64.5 ಮಿ. ಮೀ. ನಿಂದ 115. ಮಿ. ಮೀ. ತನಕ ಮಳೆಯಾಗುವ ಸಾಧ್ಯತೆ ಇದೆ.

      ದಿನಾಂಕ 8ರ ಬೆಳಗ್ಗೆಯಿಂದ ಆಗಸ್ಟ್ 10ರ ತನಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದೆ ಎಂದು ಜಿಲ್ಲಾಡಳಿತ ಹೇಳಿದೆ.

      ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

      24*7 ಕಂಟ್ರೋಲ್ ರೂಂ 08272-221077. ವಾಟ್ಸಪ್ ಸಂಖ್ಯೆ 8550001077.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+