ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಯಲ್ಲಿ 4 ದಿನ ಭಾರಿ ಮಳೆ ಎಚ್ಚರಿಕೆ

|
Google Oneindia Kannada News

ಮಡಿಕೇರಿ, ಆಗಸ್ಟ್ 05 : ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆಯಲ್ಲಿ ಕೊಡಗು ಜಿಲ್ಲಾಡಳಿತ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದೆ. ಆಗಸ್ಟ್ 6 ರಿಂದ 10ರ ತನಕ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಭಾರಿ ಮಳೆ ಮುನ್ಸೂಚನೆ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ಭಾರಿ ಮಳೆ ಮುನ್ಸೂಚನೆ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್

ಆಗಸ್ಟ್ 6ರ ಬೆಳಗ್ಗೆಯಿಂದ 7ರ ತನಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 115.6 ರಿಂದ 204.4 ಮಿ. ಮೀ. ತನಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

 ಉಡುಪಿಯಲ್ಲಿ ಮಳೆ: ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು ಉಡುಪಿಯಲ್ಲಿ ಮಳೆ: ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

Heavy Rain IMD Issues Alert For Kodagu District

ಆಗಸ್ಟ್ 7ರ ಬೆಳಗ್ಗೆಯಿಂದ ಆಗಸ್ಟ್ 8ರ ಬೆಳಗ್ಗೆ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 64.5 ಮಿ. ಮೀ. ನಿಂದ 115. ಮಿ. ಮೀ. ತನಕ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿಯಲ್ಲಿ ಬಿರುಸು ಪಡೆದ ಮಳೆ; ಜಲಾಶಯಗಳ ನೀರಿನ ಮಟ್ಟ ಏರಿಕೆ ಬೆಳಗಾವಿಯಲ್ಲಿ ಬಿರುಸು ಪಡೆದ ಮಳೆ; ಜಲಾಶಯಗಳ ನೀರಿನ ಮಟ್ಟ ಏರಿಕೆ

ದಿನಾಂಕ 8ರ ಬೆಳಗ್ಗೆಯಿಂದ ಆಗಸ್ಟ್ 10ರ ತನಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

24*7 ಕಂಟ್ರೋಲ್ ರೂಂ 08272-221077. ವಾಟ್ಸಪ್ ಸಂಖ್ಯೆ 8550001077.

English summary
The India Meteorological Department (IMD) has issued a alert of heavy rain in Kodagu district of Karnataka. District may witness for heavy rain for three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X