ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು: 24 ಗಂಟೆಗಳಲ್ಲಿ 104 ಮಿ.ಮೀ ಮಳೆ ದಾಖಲು

By Nayana
|
Google Oneindia Kannada News

ಕೊಡಗು, ಜೂನ್ 11: ದೇಶಾದ್ಯಂತ ನೈಋತ್ಯ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದಲ್ಲೂ ಅದರಲ್ಲೂ ಕರಾವಳಿ, ದಕ್ಷಿಣ ಕನ್ನಡ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ.

ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 104.56 ಮಿ.ಮೀ. ಕಳೆದ ವರ್ಷ ಇದೇ ದಿನ 22.60 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 761.49 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 369.68 ಮಿ.ಮೀ ಮಳೆಯಾಗಿತ್ತು.

ಮುಂಗಾರು: ಮಹಾರಾಷ್ಟ್ರ, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಂಭವ ಮುಂಗಾರು: ಮಹಾರಾಷ್ಟ್ರ, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಂಭವ

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 116.65 ಮಿ.ಮೀ. ಕಳೆದ ವರ್ಷ ಇದೇ ದಿನ 26.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1056.94 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 453.60 ಮಿ.ಮೀ. ಮಳೆಯಾಗಿತ್ತು.

Heavy rain in Kodagu district: 104 mm rainfall in 24 hours

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 92.90 ಮಿ.ಮೀ. ಕಳೆದ ವರ್ಷ ಇದೇ ದಿನ 16.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 598.07 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 344.44 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 104.12 ಮಿ.ಮೀ. ಕಳೆದ ವರ್ಷ ಇದೇ ದಿನ 24.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 629.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 311 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 71.20, ನಾಪೋಕ್ಲು 131.20, ಸಂಪಾಜೆ 90.20, ಭಾಗಮಂಡಲ 174, ವಿರಾಜಪೇಟೆ ಕಸಬಾ 104, ಹುದಿಕೇರಿ 124, ಶ್ರೀಮಂಗಲ 118.20, ಪೊನ್ನಂಪೇಟೆ 82.20, ಅಮ್ಮತಿ 71, ಬಾಳಲೆ 58, ಸೋಮವಾರಪೇಟೆ ಕಸಬಾ 138.80, ಶನಿವಾರಸಂತೆ 101.40, ಶಾಂತಳ್ಳಿ 196, ಕೊಡ್ಲಿಪೇಟೆ 135.50, ಸುಂಟಿಕೊಪ್ಪ 42, ಕುಶಾಲನಗರ 11 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2806.80 ಅಡಿಗಳು, ಕಳೆದ ವರ್ಷ ಇದೇ ದಿನ 2808.07 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 14.40 ಮಿ.ಮೀ. ಕಳೆದ ವರ್ಷ ಇದೇ ದಿನ 10.40 ಮಿ.ಮೀ., ಇಂದಿನ ನೀರಿನ ಒಳ ಹರಿವು 4780 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 345 ಕ್ಯುಸೆಕ್ ಇದೆ.

English summary
Heavy rainfall in Coorg district in last 24 hours and 174 mm rainfall recorded in Bhagamandala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X