ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಮಳೆ ಹೆಚ್ಚಳ; ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 21: ಕೊಡಗು ಜಿಲ್ಲೆಯಲ್ಲಿ ಮಂಗಳವಾರದಿಂದ ಮಳೆಯು ಚುರುಕಾಗಿದ್ದು, ಬುಧವಾರ ಬೆಳಗಿನಿಂದಲೇ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆ ಬೀಳುತ್ತಿದೆ. ಜಿಲ್ಲಾಡಳಿತವು ಈಗಾಗಲೇ ಒಟ್ಟು 70 ಪ್ರದೇಶಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ಗುರುತಿಸಿ, ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ.

ಕಳೆದ 10 ದಿನಗಳಿಂದ ಬಿದ್ದ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಮಾಹಿತಿ ಪಡೆದು ಸೂಕ್ತ ನಿರ್ದೆಶನವನ್ನೂ ನೀಡಿದ್ದಾರೆ.

"ಸರ್ಕಾರದಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿದೆ. ಹಾಗೆಯೇ ಕೋವಿಡ್- 19 ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಚಾಚುತಪ್ಪದೇ ಪಾಲಿಸಬೇಕು. ಹೆಚ್ಚು ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರವನ್ನು ನೀಡಬೇಕು. ಬೆಳೆ ಬೆಳೆಯಲು ಬಿತ್ತನೆ ಬೀಜಗಳನ್ನು ಉಚಿತವಾಗಿ ನೀಡಬೇಕು, ಪ್ರವಾಹ ತಡೆಯಲು ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ," ಎಂದರು.

Madikeri: Heavy Rain In Kodagu; District Administration Is ready To Face Flood Situation

ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಮಳೆಯ ಪ್ರಮಾಣ ಶೇಕಡವಾರು ಹೆಚ್ಚಾಗಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ ಹೆಚ್ಚಿನ ಮಳೆಯಾಗಿದೆ. ಮುಂದಿನ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಸಾಧಾರಣಕ್ಕಿಂತ ಅಧಿಕ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಆ ದಿಸೆಯಲ್ಲಿ ಪ್ರಾಕೃತಿಕ ವಿಕೋಪದ ಮುನ್ಸೂಚನೆಯನ್ನು ಅರಿತು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳು ತೆಗೆದುಕೊಂಡಿರುವ ಮಾರ್ಗಸೂಚಿಗಳು ಮತ್ತು ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ವಿವರ ಪಡೆದರು.

Madikeri: Heavy Rain In Kodagu; District Administration Is ready To Face Flood Situation

"ಜುಲೈ 14 ಮತ್ತು 15 ರಂದು ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದ್ದು, ಧಾರಾಕಾರ ಮಳೆಯಿಂದ ಒಬ್ಬರು ಮೃತಪಟ್ಟಿದ್ದು, 4 ವನ್ಯ ಜೀವಿಗಳ ಪ್ರಾಣ ಹಾನಿಯಾಗಿದೆ, 2 ಮನೆಗಳು ಸಂಪೂರ್ಣ ನಾಶವಾಗಿದ್ದು, 36 ಮನೆಗಳು ಭಾಗಶಃ ಹಾನಿಯಾಗಿದೆ. ಒಟ್ಟು 38 ಮನೆಗಳು ಹಾನಿಗೊಳಗಾಗಿದೆ. ಸೆಸ್ಕ್, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಎಚ್ಚರ ವಹಿಸಿದ್ದಾರೆ. ಎನ್‌ಡಿಆರ್‌ಎಫ್, ಪೊಲೀಸ್ ಇಲಾಖೆ, ಅಗ್ನಿ ಶಾಮಕದಳ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಂಡಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ,'' ಎಂದು ಕೊಡಗು ಜಿಲ್ಲಾಧಿಕಾರಿ ಸೋಮಲ್ ಮಾಹಿತಿ ನೀಡಿದರು.

"ಕೊಡಗು ಜಿಲ್ಲೆಯಲ್ಲಿ 85 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ತಾತ್ಕಾಲಿಕ ಆಶ್ರಯ ನೀಡಲಾಗುವುದು. ಜಿಲ್ಲಾಡಳಿತ ಪ್ರವಾಹವನ್ನು ಎದುರಿಸುವಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.''

Madikeri: Heavy Rain In Kodagu; District Administration Is ready To Face Flood Situation

"ಕೊಡಗು ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸರಾಸರಿ 744.7 ಮಿ.ಮೀ ಮಳೆ ಆಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಇದ್ದ ಮಳೆಯ ತೀವ್ರತೆ ಈಗ ಕಾಣುತ್ತಿಲ್ಲ. ಜಿಲ್ಲೆಗೆ 2018ರ ಜೂನ್ ಮತ್ತು ಜುಲೈ ತಿಂಗಳಿನಲ್ಲಿ 2219.7 ಮಿ.ಮೀ, 2019 ರಲ್ಲಿ 856.4 ಮಿ.ಮೀ, 2020 ರಲ್ಲಿ 849.1 ಮಿ.ಮೀ ಮಳೆಯಾಗಿದೆ,'' ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ವಿವರಿಸಿದರು.

English summary
The Kodagu district Administration has already identified a total of 70 areas as flood affected areas and is preparing to deal with the situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X