ಮಳೆಯ ಅಬ್ಬರ, ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಕೊಡಗು, ಆಗಸ್ಟ್ 28 : ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಹಾರಂಗಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಾಗಿದೆ.

ಮಡಿಕೇರಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೀರು ಹರಿದು ಬಂದು ನೇರವಾಗಿ ಹಾರಂಗಿ ಜಲಾಶಯವನ್ನು ಸೇರುತ್ತಿದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ನದಿಗೆ ಏಳುಸಾವಿರ ಹಾಗೂ ನಾಲೆಗಳಿಗೆ ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.

Heavy rain in Kodagu district, Harangi reservoir inflow increased

ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಾಗಲಿದ್ದು, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಹೆಚ್ಚಾಗಲಿದೆ.

ಗರಿಷ್ಠ 2,859 ಅಡಿಯಿಷ್ಟಿರುವ ಜಲಾಶಯದಲ್ಲಿ ಈಗಾಗಲೇ 2858.41 ಅಡಿಯಷ್ಟು ನೀರಿದ್ದು, ಸೋಮವಾರ ಜಲಾಶಯಕ್ಕೆ 7845 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ನೀರು ಹರಿದು ಬರುತ್ತಿರುವುದು ಕಂಡು ಬಂದಿದೆ. ಕಳೆದ ವರ್ಷ ಇದೇ ವೇಳೆಗೆ ಕೇವಲ 1441 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಇದೀಗ ಸುರಿಯುತ್ತಿರುವ ಮಳೆಯನ್ನು ಗಮನಿಸಿದರೆ ಇನ್ನು ಕೆಲವು ದಿನಗಳು ಹೀಗೆಯೇ ಸುರಿಯುವ ಸಾಧ್ಯತೆಗಳಿವೆ.

ಭಾನುವಾರದಿಂದ ಸೋಮವಾರದವರೆಗೆ ಸುರಿದ ಮಳೆದ ಮಳೆಯ ಪ್ರಮಾಣವನ್ನು ಗಮನಿಸಿದರೆ ಸರಾಸರಿ ಮಳೆ 35.95 ಮಿ.ಮೀ. ಮಳೆ ಸುರಿದಿದೆ. ಜನವರಿಯಿಂದ ಇಲ್ಲಿಯವರೆಗಿನ 1653.52 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 165 ಮಿ.ಮೀ.ನಷ್ಟು ಹೆಚ್ಚು ಮಳೆ ಸುರಿದಿದೆ.

ಮಡಿಕೇರಿ ತಾಲೂಕಿನಲ್ಲಿ 57.45 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 25.33 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 25.07 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಅತಿಹೆಚ್ಚು ಮಳೆ 63.8 ಮಿ.ಮೀ. ಭಾಗಮಂಡಲದಲ್ಲಿ, ಅತಿಕನಿಷ್ಠ 10ಮಿ.ಮೀ. ಮಳೆ ಕೊಡ್ಲಿಪೇಟೆಯಲ್ಲಿ ಸುರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+