ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜೂನ್ 14; ಕೊಡಗು ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ 5 ತಾಲ್ಲೂಕಿನಾದ್ಯಂತ ಮಳೆ ಬೀಳುತ್ತಿದೆ.

ಮಡಿಕೇರಿಯಲ್ಲಿ ತೀವ್ರ ಚಳಿಯ ವಾತಾವರಣವಿದೆ. ಅತಿವೃಷ್ಟಿ ಹಾನಿ ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಈ ಹಿಂದೆಯೇ ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆ

ಮಡಿಕೇರಿಯಲ್ಲಿ ಶನಿವಾರ ತಡರಾತ್ರಿಯಿಂದಲೂ ಭಾರಿ ಮಳೆ ಸುರಿಯುತ್ತಿದೆ. ಎರಡು ದಿನಗಳಿಂದ ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಸೋಮವಾರಪೇಟೆ ತಾಲ್ಲೂಕಿನ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ, ಮಡಿಕೇರಿ ತಾಲ್ಲೂಕಿನ ಹಮ್ಮಿಯಾಲ, ಮುಟ್ಲು, ತಲಕಾವೇರಿಯಲ್ಲಿ ಉತ್ತಮ ಮಳೆ ಆಗುತ್ತಿದೆ.

 ಕರ್ನಾಟಕ ಮುಂಗಾರು: ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ಭಾರಿ ಮಳೆ ಕರ್ನಾಟಕ ಮುಂಗಾರು: ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ಭಾರಿ ಮಳೆ

ಮಡಿಕೇರಿ-ಸೋಮವಾರಪೇಟೆ-ವೀರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ 10-12 ಮರಗಳು ಬಿದ್ದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಗಳು ಅದನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ

ಜನಜೀವನ ಅಸ್ತವ್ಯಸ್ಥ

ಜನಜೀವನ ಅಸ್ತವ್ಯಸ್ಥ

ಮಳೆಯಿಂದಾಗಿ ಜನಜೀವನ ಅಸ್ತ್ಯವ್ಯಸ್ತವಾಗಿದೆ. ಮಳೆ ಹೆಚ್ಚಾಗುತ್ತಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಹೆಚ್ಚಿನ ರೈತರು ತೋಟಗಳಲ್ಲಿ ಬೆಳಗ್ಗೆಯಿಂದಲೇ ಕೆಲಸ ಮಾಡುತ್ತಿರುವುದು ಕಂಡು ಬಂದಿತು. ಮಂಗಳವಾರ ಮತ್ತು ಬುಧವಾರ ಪಕ್ಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಎನ್‌ಡಿಆರ್‌ಎಫ್ ತಂಡವಿದೆ

ಎನ್‌ಡಿಆರ್‌ಎಫ್ ತಂಡವಿದೆ

ಕೊಡಗಿನಲ್ಲೂ ಭಾರೀ ಮಳೆಯಾಗುವ ಸಂಭವವಿದೆ. ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು ಎನ್‌ಡಿಆರ್‌ಎಫ್‌ ತಂಡ ಜಿಲ್ಲೆಯಲ್ಲೇ ಬೀಡು ಬಿಟ್ಟಿದೆ. ಅಗತ್ಯ ಬಿದ್ದರೆ ಕಾಳಜಿ ಕೇಂದ್ರಗಳನ್ನು ತೆರಯಲೂ ಜಿಲ್ಲಾಡಳಿತ ಯೋಚಿಸಿದೆ.

ಎಲ್ಲಿ ಎಷ್ಟು ಮಳೆಯಾಗಿದೆ?

ಎಲ್ಲಿ ಎಷ್ಟು ಮಳೆಯಾಗಿದೆ?

ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 47.9 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 77.3 ಮಿ.ಮೀ.. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.2 ಮಿ.ಮೀ.. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ 35.4 ಮಿ.ಮೀ. ಮಳೆಯಾಗಿದೆ.

ಜಲಾಶಯಗಳ ನೀರು

ಜಲಾಶಯಗಳ ನೀರು

ಮಳೆಯಿಂದಾಗಿ ಹಾರಂಗಿ ಜಲಾಶಯ ಮತ್ತು ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ದಾಖಲಿಸಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2825.37 ಅಡಿಗಳು. ಒಳಹರಿವು 885 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು 40 ಕ್ಯುಸೆಕ್.

English summary
As per India Meteorological Department (IMD) prediction heavy rain in Kodagu district from past two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X