ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ವರುಣನ ಆರ್ಭಟ: ತುಂಬಿ ಹರಿಯುತ್ತಿರುವ ನದಿ- ಕೊಳ್ಳಗಳು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 14: ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಕಳೆದ 48 ಗಂಟೆಗಳಿಂದ ಮಳೆಯು ವೇಗವನ್ನು ಪಡೆದುಕೊಂಡಿದ್ದು, ಕೆರೆ, ಕೊಳ್ಳ, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.

ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು, ಮಡಿಕೇರಿ ನಗರದ ಮಂಗಳೂರು ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಗ್ರಾಮೀಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೆಲ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದು, ಒಂದೇ ದಿನ ನೀರಿನ ಮಟ್ಟ ಮೂರು ಅಡಿ ಏರಿಕೆಯಾಗಿದೆ.

 Heavy Rain Lashes In Kodagu District: Water Lavel Increasing In Harangi Dam

ಹಾರಂಗಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2849.55 ಅಡಿಗಳಷ್ಟು ದಾಖಲಾಗಿದ್ದು, ಜಲಾಶಯ ಭರ್ತಿಯಾಗಲು 10 ಅಡಿಗಳಷ್ಟು ಬಾಕಿ ಇದೆ. ಜಲಾಶಯಕ್ಕೆ 7753 ಕ್ಯೂಸೆಕ್ಸ್‌ಗಳಷ್ಟು ನೀರು ಹರಿದು ಬರುತ್ತಿದೆ. ಹೊರಹರಿವು 405 ಕ್ಯೂಸೆಕ್ಸ್‌ಗಳಷ್ಟು ಇದೆ. ಇದೇ ರೀತಿ ಮಳೆಯಾದರೆ ಈ ವಾರಾಂತ್ಯದೊಳಗೆ ಜಲಾಶಯ ಭರ್ತಿ ಆಗಲಿದೆ.

ಪ್ರವಾಹದ ಸಾಧ್ಯತೆ ಇರುವ ಸ್ಥಳಗಳಿಗೆ ಮಂಗಳವಾರ ಮಡಿಕೇರಿ ಶಾಸಕ ಅಪ್ಪಚು ರಂಜನ್ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. "ಬಲುಮುರಿ ಗ್ರಾಮದ ಕಾವೇರಿ ನದಿಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಶಾಸಕ ಅಪ್ಪಚ್ಚು ರಂಜನ್ ನದಿ ಪಾತ್ರದ ಜನರ ಎಚ್ಚರಿಕೆಯಿಂದ ಇರುವಂತೆ,'' ಹೇಳಿದರು.

ಬಳಿಕ ಮಾತಾನಾಡಿದ ಅವರು, "ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾರೀ ಮಳೆ ಕಳೆದ 24 ಗಂಟೆಯಲ್ಲಿ 45.2 ಮಿ.ಮೀ ಮಳೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಎಡಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ಅಷ್ಟೇ ಅಲ್ಲದೇ ಇದೇ ರೀತಿ ಮಳೆ ಮುಂದುವರಿದರೆ ಕಾವೇರಿ ಉಕ್ಕಿ ಹರಿವ ಸಾಧ್ಯತೆಯು ಹೆಚ್ಚಾಗಿದೆ,'' ಎಂದರು.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿಯೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮಡಿಕೇರಿ ತಾಲೂಕಿನ ಬಲುಮುರಿಯ ಕಾವೇರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದೆ. ಬಲುಮುರಿ ಸೇತುವೆ ಮುಳುಗಡೆಯಾಗಲೂ ಕೇವಲ ಎರಡು ಅಡಿ ಮಾತ್ರ ಬಾಕಿಯಿದೆ. ಕಾಳಜಿ ಕೇಂದ್ರಗಳ ವ್ಯವಸ್ಥೆ ಅಹಾರ ಪೂರೈಕೆ ಬಗ್ಗೆ ಸಕಲ ರೀತಿಯಲ್ಲಿ ಸಿದ್ಧತೆಗಳು ನಡೆಸಿದೆ.

Recommended Video

ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! Red Alert ಘೋಷಣೆ | Oneindia Kannada

ಕೊಡಗು ಜಿಲ್ಲೆಯಲ್ಲಿ ಎನ್‍ಡಿಆರ್‌ಎಫ್ ತಂಡ ಬೀಡು ಬಿಟ್ಟಿದ್ದು, ಭೂಕುಸಿತ ಮತ್ತು ಕಾವೇರಿ ನದಿಯ ಪ್ರವಾಹ ಸಂಭವಿಸಬಹುದಾದ ಸ್ಥಳಗಳ ನಿವಾಸಿಗಳಿಗೆ ಜಿಲ್ಲಾಡಳಿತವು ಎಚ್ಚರಿಕೆಯನ್ನು ನೀಡಿದ್ದು, ಪರಿಸ್ಥಿತಿಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ.

English summary
The Kodagu district has been experiencing heavy rains for the past 48 hours and the water levels of the Cauvery and Lakshmana Thirtha rivers are rising.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X