ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ನಿಲ್ಲದ ಮಳೆ: ಆ.31ರವರೆಗೂ ಭಾರೀ ವಾಹನ ಓಡಾಟಕ್ಕೆ ಬ್ರೇಕ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಆಗಸ್ಟ್‌ 10: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಹೆಚ್ಚಿನ ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ, ಗುಡ್ಡ ಕುಸಿತದ ಅವಘಡಗಳೂ ಸಂಭವಿಸುತ್ತಿವೆ. ಹೀಗಾಗಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ.

Recommended Video

Donald Trump Exits briefing after shooting near White House | Oneindia Kannada

ಈ ಹಿಂದೆ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದ್ದು, ಆಗಸ್ಟ್ 31ರವರೆಗೂ ಈ ನಿಷೇಧವನ್ನು ಮುಂದುವರಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ಕೂಡ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

 ಜುಲೈ ತಿಂಗಳಿನಿಂದಲೇ ನಿಷೇಧವಿತ್ತು

ಜುಲೈ ತಿಂಗಳಿನಿಂದಲೇ ನಿಷೇಧವಿತ್ತು

ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಿಂದ ಆಗಸ್ಟ್ 10ವರೆಗೆ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿತ್ತು. ಮರಳು, ಮರದ ದಿಮ್ಮಿ ಸಾಗಾಣಿಕೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಮಳೆ ಇನ್ನಷ್ಟು ಬಿರುಸು ಪಡೆದ ಹಿನ್ನೆಲೆಯಲ್ಲಿ ವಾಹನಗಳ ಓಡಾಟದ ಮೇಲಿನ ನಿಷೇಧವನ್ನು ಮುಂದುವರಿಸಲಾಗಿದೆ.

ತಲಕಾವೇರಿ ಗುಡ್ಡ ಕುಸಿತ; ಸ್ಥಳಕ್ಕೆ ಆಗಮಿಸಿದ ನಾರಾಯಣಾಚಾರ್ ಮಕ್ಕಳುತಲಕಾವೇರಿ ಗುಡ್ಡ ಕುಸಿತ; ಸ್ಥಳಕ್ಕೆ ಆಗಮಿಸಿದ ನಾರಾಯಣಾಚಾರ್ ಮಕ್ಕಳು

 ಕೊಡಗಿನಲ್ಲಿ ಮುಂದುವರೆದ ಮಳೆ ಹಾನಿ

ಕೊಡಗಿನಲ್ಲಿ ಮುಂದುವರೆದ ಮಳೆ ಹಾನಿ

ಕೊಡಗಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಅಲ್ಲಲ್ಲಿ ಹಾನಿ ಸಂಭವಿಸುತ್ತಿವೆ. ಸೋಮವಾರಪೇಟೆಯಲ್ಲಿ 600ಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಅಲ್ಲಲ್ಲಿ ಮರಗಳೂ ಮನೆಗಳ ಮೇಲೆ ಬಿದ್ದಿವೆ. ರೈತರು ಬೆಳೆದ ಬೆಳೆಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ವಿರಾಜಪೇಟೆ ಭಾಗದಲ್ಲಿ ಮೂರು ಕೋಟಿಗೂ ಅಧಿಕ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

 ನಾಪತ್ತೆಯಾದವರಿಗೆ ಮುಂದುವರೆದ ಶೋಧ

ನಾಪತ್ತೆಯಾದವರಿಗೆ ಮುಂದುವರೆದ ಶೋಧ

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ಕುಟುಂಬದ ಐವರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ತಲಕಾವೇರಿ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಮಕ್ಕಳು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದರು. ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ನಲ್ಲಿ ನೆಲೆಸಿರುವ ಇಬ್ಬರು ಮಕ್ಕಳು ತಲಕಾವೇರಿಗೆ ಬಂದು ಸೋಮವಾರ ಭಾಗಮಂಡಲ ಹೋಟೆಲ್ ಮಯೂರದಲ್ಲಿ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು, ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು. ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ. ಈಗಾಗಲೇ ಆನಂದ ತೀರ್ಥ ಅವರ ದೇಹ ಸಿಕ್ಕಿದೆ. ಇನ್ನು ನಾಲ್ವರ ಶೋಧ ಕಾರ್ಯ ನಡೆಯುತ್ತಿದೆ ಎಂದು ಸೋಮಣ್ಣ ಅವರು ವಿವರಣೆ ನೀಡಿದರು.

ಮಡಿಕೇರಿ: ಅರಣ್ಯ ಇಲಾಖೆ ತೋಡಿದ ಇಂಗುಗುಂಡಿಯೇ ಗುಡ್ಡ ಕುಸಿತಕ್ಕೆ ಕಾರಣವಾಯಿತಾ?ಮಡಿಕೇರಿ: ಅರಣ್ಯ ಇಲಾಖೆ ತೋಡಿದ ಇಂಗುಗುಂಡಿಯೇ ಗುಡ್ಡ ಕುಸಿತಕ್ಕೆ ಕಾರಣವಾಯಿತಾ?

 ಜನರಿಗೆ ಎಚ್ಚರದಿಂದಿರಲು ಸೂಚನೆ

ಜನರಿಗೆ ಎಚ್ಚರದಿಂದಿರಲು ಸೂಚನೆ

ಜಿಲ್ಲೆಯಲ್ಲಿ ಗಾಳಿಸಹಿತ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಭೂಕುಸಿತದ ಘಟನೆಗಳೂ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

English summary
Kodagu district getting heavy rain since one week. Heavy vehicles prohibited as a precautionary measure in the district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X