ಕೊಡಗು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಮಡಿಕೇರಿ, ನವೆಂಬರ್ 19: ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಅಸಿಂಧುಗೊಳಿಸಿ ರಾಜ್ಯ ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ಆದೇಶ ನೀಡಿದೆ.

ಇದರಿಂದಾಗಿ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ಇತ್ತೀಚಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತ್ತು ಆಯ್ಕೆ ಅಸಿಂಧುವಾಗಿದೆ.

ಈ ಮೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಸಮರ್ಪಕವಾಗಿ ನಡೆದಿಲ್ಲ ಎಂದು ಹಿರಿಯ ವಕೀಲರಾದ ಎ.ಎಸ್. ಪೊನ್ನಣ್ಣ ಹಾಗೂ ಎಂ.ಎಸ್. ಚಂದ್ರಮೌಳಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಅಸಿಂಧು ಎಂದು ಆದೇಶ ನೀಡಿದೆ.

Kodagu: High Court Invalidate Kushalanagar Somawarapete Virajpete Local Body Election

ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ತಕರಾರು ಸಲ್ಲಿಸಲು ಹತ್ತು ದಿನದ ಕಾಲಾವಕಾಶವನ್ನು ಕೂಡ ಕೋರ್ಟ್ ನೀಡಿದೆ. ಈ ಗಮನಾರ್ಹ ಆದೇಶದಿಂದಾಗಿ ಮೂರು ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕೈಗೆ ಬಂದ ಅಧಿಕಾರ ಇಲ್ಲದಂತಾಗಿದೆ. ಮೂರು ಪಂಚಾಯಿತಿಗಳಲ್ಲಿಯೂ ಬಿಜೆಪಿ ಅಧಿಕಾರವನ್ನು ತನ್ನದಾಗಿಸಿಕೊಂಡಿತ್ತು.

Recommended Video

      ಪೊಲೀಸ್ ಅಂದ್ರೆ ಹೀಗಿರಬೇಕು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+